ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

Last Updated 12 ಜನವರಿ 2021, 14:32 IST
ಅಕ್ಷರ ಗಾತ್ರ

ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಹಾಸನ ಬೈಪಾಸ್‌ನಿಂದ ಸಕಲೇಶಪುರದ ಹೆಗ್ಗದ್ದೆ ವರೆಗಿನ ರಸ್ತೆಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯಸೂಚಿಸಿದರು.

ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಅವರೊಂದಿಗೆ ಮಂಗಳವಾರ ರಸ್ತೆ ಕಾಮಗಾರಿ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

‘ಈ ವರ್ಷದ ಮೇ ತಿಂಗಳ ಅಂತ್ಯದ ವೇಳೆಗೆ ಮಳೆಗಾಲ ಪ್ರಾರಂಭವಾಗುವುದರಿಂದ ಆದಷ್ಟು ಗರಿಷ್ಠ ಕಾಮಗಾರಿ ಪೂರ್ಣಗೊಳಿಸಿ 2022ಕ್ಕೆ ಸಂಪೂರ್ಣ ಕಾಮಗಾರಿ ಮುಗಿಸಬೇಕು. ಹಲವು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಪ್ರಯಾಣಿಕರು ಕಷ್ಟ ಅನುಭವಿಸುತ್ತಿದ್ದಾರೆ. ಈಗಲಾದರೂ ಕೆಲಸ ಚುರುಕಿನಿಂದ ಸಾಗಬೇಕು. ಯೋಜನೆಗೆ ಅಗತ್ಯವಿರುವ ಮರಳು ಹಾಗೂ ಕಲ್ಲಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ’ ಎಂದು ಸಚಿವರು ಹೇಳಿದರು.

ರಸ್ತೆ ನಿರ್ಮಾಣಕ್ಕೆ ಮರಳು ಹಾಗೂ ಕಲ್ಲು ಒದಗಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಾಮಗಾರಿ ಚುರುಕುಗೊಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದರು.

ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹಾಸನ–ಮಂಗಳೂರು ರಸ್ತೆ ಕಾಮಗಾರಿ ಬಗ್ಗೆ ಕೇಂದ್ರ ಸಚಿವ ನಿತಿನ್ಗಡ್ಕರಿ ಜತೆ ಚರ್ಚಿಸಲಾಗಿದೆ. ಗುತ್ತಿಗೆ ಪಡೆದವರು ಕಾಮಗಾರಿ ಪೂರ್ಣಗೊಳಿಸದ ಕಾರಣ ಉಪಗುತ್ತಿಗೆದಾರರಿಗೆ ಪೂರ್ಣ ಪ್ರಮಾಣದ ಕಾಮಗಾರಿ ವಹಿಸಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಗೊಳಗಾಗಿದ್ದರಸ್ತೆಗಳ ಗುಂಡಿ ಮುಚ್ಚುವ ಕಾರ್ಯ 20 ದಿನದೊಳಗೆ ಪೂರ್ಣಗೊಳಿಸಬೇಕು. ಈಗಾಗಲೇ 13 ಕಿ.ಲೋ ಮೀಟರ್ ರಸ್ತೆ ಆಗಿದೆ. ಮಾರನಹಳ್ಳಿ -ಮಂಗಳೂರಿನ ನಡುವೆ ರಸ್ತೆ ಸುರಂಗ ಮಾರ್ಗ ವಿಸ್ತೃತ ಕ್ರಿಯಾ ಯೋಜನೆ ತಯಾರಾಗಿದೆ. ₹10 ಸಾವಿರ ಕೋಟಿ ವೆಚ್ಚದ ಯೋಜನೆಗೆ ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆ ಇದೆಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT