ಹಾಸನ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಾದ ಪ್ರಧಾನ ಮಂತ್ರಿ ಜನಸುರಕ್ಷ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಗಳಡಿ ಶೇ 100 ರಷ್ಟು ಸಾಧನೆ ಮಾಡಿದ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಬ್ಯಾಗತವಳ್ಳಿ ಗ್ರಾಮ ಪಂಚಾಯಿತಿಗೆ ಅಭಿನಂದನಾ ಸಮಾರಂಭವು ಕಚೇರಿಯಲ್ಲಿ ನಡೆಯಿತು.

ದೊಡ್ಡಬ್ಯಾಗತವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸಂಪೂರ್ಣ ವಿಮಾ ಗುರಿ ಸಾಧಿಸಿರುವುದನ್ನು ಶ್ಲಾಘಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಎಂ., ಈ ಯೋಜನೆಗಳ ಉಪಯೋಗ, 18 ರಿಂದ 70 ವರ್ಷದ ಒಳಗಿನ ನಾಗರಿಕರಿಗೆ ಇರುವ ಅನುಕೂಲದ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್ ಎಚ್.ಕೆ. ಅಧ್ಯಕ್ಷತೆ ವಹಿಸಿದ್ದರು. ಹಾಸನ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಲತಾ ಸರಸ್ವತಿ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಆಂತೋನಿ ರಾಜ್, ತಾಲ್ಲೂಕು ಪಂಚಾಯಿತಿಯ ಪಿ.ಆರ್. ಗೋಪಾಲ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಾಗರಾಜು, ಗ್ರಾಮ ಪಂಚಾಯಿತಿಯ ಹೇಮಾವತಿ ಸಂಜೀವಿನ ಒಕ್ಕೂಟದ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯ ರಂಗಯ್ಯ, ನಾರಾಯಣಗೌಡ, ಕುಮಾರ್, ಅಮ್ಮಯಮ್ಮ, ಸುಶೀಲಮ್ಮ, ತಾಲ್ಲೂಕು ಪಂಚಾಯಿತಿ ಕಾರ್ಯಕ್ರಮ ವ್ಯವಸ್ಥಾಪಕ ನವೀನ್, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಸ್.ಪಿ. ಜಯಣ್ಣ, ಎನ್ಆರ್ಎಲ್ಎಂ ವಿಭಾಗದ ಸಿಬ್ಬಂದಿ, ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.