ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆ ಪೂರ್ಣಗೊಳಿಸಲು ಜೆಡಿಎಸ್‍ಗೆ ಶಕ್ತಿ ನೀಡಿ: ಎಚ್.ಡಿ. ರೇವಣ್ಣ

Last Updated 16 ಏಪ್ರಿಲ್ 2022, 6:58 IST
ಅಕ್ಷರ ಗಾತ್ರ

ಹೊಳೆನರಸೀಪುರ: ರಾಜ್ಯದ ಅನೇಕ ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿದ್ದು, ಕೃಷಿ ಮತ್ತು ಕುಡಿಯುವ ನೀರಿಗೆ ತೀವ್ರ ತೊಂದರೆ ಆಗುತ್ತಿದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಜೆಡಿಎಸ್‌ಗೆ ಅಧಿಕಾರ ಕೊಡಿ. ಈ ಬಗ್ಗೆ ಗಮನ ಸೆಳೆಯಲು ಏ.16ರಿಂದ ಜನತಾ ಜಲಧಾರೆ ಯಾತ್ರೆ ಪ್ರಾರಂಭಿಸುತ್ತಿದ್ದೇವೆ’ ಎಂದು ಶಾಸಕ ಎಚ್.ಡಿ. ರೇವಣ್ಣ ತಿಳಿಸಿದರು.

‘ಲಾಲ್‍ ಬಹದ್ದೂರ್ ಶಾಸ್ತ್ರಿ ಪ್ರಧಾನಿ ಯಾಗಿದ್ದಾಗ ರಾಜ್ಯದ ನೀರಾವರಿ ಯೋಜನೆಗೆ ₹230 ಕೋಟಿ ನೀಡಿದ್ದರು. ನಂತರ ದೇವೇಗೌಡರು ಪ್ರಧಾನಿ ಆಗಿದ್ದಾಗ ಕೃಷ್ಣ ಯೋಜನೆಗೆ ₹800 ಕೋಟಿ ನೀಡಿದ್ದು ಬಿಟ್ಟರೆ, ಮತ್ತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ನೀಡಿಲ್ಲ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ₹5 ಸಾವಿರ ಕೋಟಿ ಅವಶ್ಯಕತೆ ಇದೆ. ಈ ಯೋಜನೆಗಳು ಪೂರ್ಣಗೊಂಡಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ’ ಎಂದು ಶುಕ್ರ ವಾರ ಸುದ್ದಿಗೋಷ್ಠಿಯಲ್ಲಿ
ತಿಳಿಸಿದರು.

‘ಹಾಸನ ಜಿಲ್ಲೆಯ ಶ್ರೀರಾಮ ದೇವರ ಅಣೆಕಟ್ಟೆಯ ಉತ್ತರ ಮತ್ತು ದಕ್ಷಿಣ ನಾಲೆಗಳನ್ನು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ₹125 ಕೋಟಿ ವೆಚ್ಚದಲ್ಲಿ ಆಧುನೀಕರಣ ಗೊಳಿಸಲಾಗಿತ್ತು. ಕಾವೇರಿ ನೀರಾವರಿ ಪ್ರದೇಶದಲ್ಲಿ 2 ಬೆಳೆ ಬೆಳೆಯಲು ನೀರಾವರಿ ಸೌಲಭ್ಯ ಒದಗಿಸಲಾಗುತ್ತಿತ್ತು. ಬಿಜೆಪಿ ಸರ್ಕಾರ ಒಂದು ಬೆಳೆಗೆ ಮಾತ್ರ ನೀರನ್ನು ಒದಗಿಸುವುದಾಗಿ ಹೇಳುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT