ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೊಳಿಸಿ

ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
Last Updated 7 ಸೆಪ್ಟೆಂಬರ್ 2020, 13:52 IST
ಅಕ್ಷರ ಗಾತ್ರ

ಹಾಸನ: ಒಳಮೀಸಲಾತಿ ಅನುಷ್ಠಾನ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ
ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಸಮುದಾಯಗಳಿಗೂ ಶಿಕ್ಷಣ, ಉದ್ಯೋಗ, ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಸಮಾನತೆ ಇರಬೇಕು. ಜನರ ಬದುಕಿನಲ್ಲಿ ಶಾಂತಿ ನೆಲೆಸಬೇಕೆಂದು ಬಿ.ಆರ್‌. ಅಂಬೇಡ್ಕರ್‌ ಹೇಳಿದ್ದರು. ಆದರೆ, ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಮರ್ಪಕವಾಗಿ ಮತ್ತು ನ್ಯಾಯಯುತವಾಗಿ ಹಂಚಿಕೆಯಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಆಗಸ್ಟ್‌ 27ರಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠವು ಐತಿಹಾಸಿಕ ತೀರ್ಪು ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಇದ್ದ ಅಡತಡೆಗಳು ನಿವಾರಣೆ ಆಗಿದೆ. ಈ ತಿಂಗಳು ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಚಾಲಕರಾದ ಗೋವಿದರಾಜು ದಿಂಡಗೂರು, ಮಂಜುನಾಥ ಕುರುವಂಕ, ತಾಲ್ಲೂಕು
ಸಂಚಾಲಕರಾದ ಕೆ.ಟಿ. ಲಕ್ಷ್ಮಯ್ಯ, ರವೇಶ್‌ ಉಳ್ಳಾವಳ್ಳಿ, ಕೇಶವ ಮೂರ್ತಿ ಕಬ್ಬಳ್ಳಿ, ರವಿಕುಮಾರ್‌, ಸಿ.ಎನ್‌. ಮಂಜುನಾಥ್‌, ಮಧು ಹಿರೀಸಾವೆ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT