ಹಾಸನ: ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರ ಆಪ್ತ ಎನ್ನಲಾದ ಪ್ರಥಮ ದರ್ಜೆ ಗುತ್ತಿಗೆದಾರ ಶಿವಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಎಂಟು ಮಂದಿ ಅಧಿಕಾರಿಗಳ ತಂಡ ಸಂಗಮೇಶ್ವರ ಬಡಾವಣೆಯಲ್ಲಿರುವ ಅವರ ನಿವಾಸ ಮೇಲೆ ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೂ ತೀವ್ರ ತಪಾಸಣೆ ನಡೆಸಿದ್ದಾರೆ.

ಎರಡು ಬ್ಯಾಗ್ ಗಳಲ್ಲಿ ದಾಖಲೆಗಳನ್ನು ತೆಗೆದುಕೊಂಡು, ಹಾಸನದ ಐಟಿ ಕಚೇರಿಗೆ ಹಾಜರಾಗಿ, ವಿಚಾರಣೆ ಎದುರಿಸುವಂತೆ ಸೂಚಿಸಿದರು. ಬುಧವಾರ ವಿಜಯನಗರದಲ್ಲಿರುವ ಐಟಿ ಕಚೇರಿಗೆ ಬಂದ ಶಿವಕುಮಾರ್, ತಮ್ಮ ಆದಾಯದ ಬಗ್ಗೆ ಹಾಗೂ ದಾಖಲೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

‘ಶಿವಕುಮಾರ್ ಯಾರೆಂಬುದು ಗೊತ್ತಿಲ್ಲ, ತಪ್ಪು ಯಾರೇ ಮಾಡಿದ್ದರೂ ಕ್ರಮ ಕೈಗೊಳ್ಳಲಿ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.