ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರೀಸಾವೆ | ಜೆಜೆಎಂ ಕಾಮಗಾರಿ 15 ತಿಂಗಳಲ್ಲಿ ಪೂರ್ಣ: ಶಾಸಕ ಸಿ.ಎನ್. ಬಾಲಕೃಷ್ಣ

Published : 20 ಸೆಪ್ಟೆಂಬರ್ 2024, 14:09 IST
Last Updated : 20 ಸೆಪ್ಟೆಂಬರ್ 2024, 14:09 IST
ಫಾಲೋ ಮಾಡಿ
Comments

ಹಿರೀಸಾವೆ: ‘ಶ್ರವಣಬೆಳಗೊಳ ಕ್ಷೇತ್ರದಲ್ಲಿ ನಡೆಯುತ್ತಿರುವ ಕೇಂದ್ರ ಸರ್ಕಾರದ ಜೆಜೆಎಂ ಯೋಜನೆ ಕಾಮಗಾರಿ ಮುಂದಿನ 15 ತಿಂಗಳಲ್ಲಿ ಪೂರ್ಣವಾಗಲಿದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಶುಕ್ರವಾರ ಹೇಳಿದರು.

ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ, ಸಂಜೀವಿನಿ ಶೇಡ್, ಶಾಲೆಯಲ್ಲಿನ ರಂಗ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮತ್ತು ಪರಿಶಿಷ್ಟ ಜಾತಿ, ಪಂಗಡದವರಿಗೆ ಅಡುಗೆ ಅನಿಲ ಸಿಲಿಂಡರ್, ಹೊಲಿಗೆ ಯಂತ್ರಗಳ ವಿತರಣೆ ಮಾಡಿ ಮಾತನಾಡಿದರು.

‘ಏತ ನೀರಾವರಿ ಮೂಲಕ ಕೆಲವು ಕೆರೆಗಳನ್ನು ತುಂಬಿಸಲಾಗಿದೆ, ಮುಂದಿನ ದಿನಗಳಲ್ಲಿ ಹಿರೀಸಾವೆ, ಮತಿಘಟ್ಟ ಕೆರೆಗೆ ನೀರು ಹರಿಸಲಾಗುವುದು. ಎನ್.ಎಚ್. 75ರ ಪಕ್ಕದ ಸರ್ವಿಸ್ ರಸ್ತೆಗಳು ಮತ್ತು ಆಂಡರ್ ಪಾಸ್ ನಿರ್ಮಾಣ ಮಾಡುವ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗುವುದು’ ಎಂದರು.

 ಮುಖಂಡ ರವಿಕುಮಾರ್ ಮಾತನಾಡಿ, ‘ಸಮುದಾಯ ಭವನ ಸೇರಿದಂತೆ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ, ಅವುಗಳ ಬಳಕೆ ಮತ್ತು ನಿರ್ವಹಣೆ ಬಗ್ಗೆ ಗ್ರಾಮಸ್ಥರು ಹೆಚ್ಚಿನ ಜಾವಾಬ್ದಾರಿ ವಹಿಸಬೇಕು’ ಎಂದರು.

ಮುಖಂಡರಾದ ಎಚ್.ಜಿ. ರಾಮಕೃಷ್ಣ, ಮಂಜುನಾಥ್, ಗ್ರಾಮ ಪಂಚಾಯಿತಿ ಪಿಡಿಓ ಸತೀಶ್, ಅಧ್ಯಕ್ಷ ಬೋರಣ್ಣ, ಸದಸ್ಯರಾದ ಮಹೇಶ್, ಲೋಕೇಶ್, ಬಸವರಾಜು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಲೋಕೇಶ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಮಂಜುನಾಥ್, ಶಿಕ್ಷಕ ಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT