ಶನಿವಾರ, ಸೆಪ್ಟೆಂಬರ್ 18, 2021
26 °C
ಕಣ್ಣಿನ, ದೇಹದ ಮೇಲೆ ಚಿಕ್ಕ, ಪುಟ್ಟ ಗಾಯದ ಗುರುತು.

ಜಮೀನಿನ ಬಳಿ ಚಿರತೆ ಕಳೇ‌ಬರ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ತಾಲ್ಲೂಕಿನ ಸಾಲಗಾಮೆ ಹೋಬಳಿಯ ಶಂಕದ ಕೊಪ್ಪಲು ಗ್ರಾಮದಲ್ಲಿ ಗಂಡು ಚಿರತೆಯ ಕಳೇಬರ ಪತ್ತೆಯಾಗಿದೆ.

ಗ್ರಾಮದ ನಿವಾಸಿ ಸ್ವಾಮಿಗೌಡ ಅವರ ಜಮೀನಿನ ಬಳಿ ಪತ್ತೆಯಾಗಿರುವ ಚಿರತೆ ವಯಸ್ಸು ಎರಡು ವರ್ಷ ಎಂದು ಅಂದಾಜಿಸಲಾಗಿದ್ದು, ಕಣ್ಣಿನ ಹಾಗೂ ದೇಹದ ಮೇಲೆ ಸಣ್ಣ ಗಾಯದ ಗುರುತು ಕಂಡು ಬಂದಿದ್ಗದು,  ಮೂಗಿನಲ್ಲಿ ರಕ್ತ ಸೋರಿಕೆಯಾಗಿದೆ.

ಹಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಈ ವಿಷಯವನ್ನು ಗ್ರಾಮಸ್ಥರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು.

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅಧಿಕಾರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು