ಶನಿವಾರ, ಮಾರ್ಚ್ 25, 2023
29 °C
ಮದ್ಯದ ಅಂಗಡಿ ಪರವಾನಗಿ ರದ್ದತಿಗೆ ಆಗ್ರಹ

ಜನ ಸಂಗ್ರಾಮ ಪರಿಷತ್‌ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಕಲಗೂಡು: ಪಟ್ಟಣದ ಮಲ್ಲಿಪಟ್ಟಣ ರಸ್ತೆಯಲ್ಲಿ ತೆರೆದಿರುವ ಎಂಎಸ್ಐಎಲ್ ಮದ್ಯದಂಗಡಿ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿ ಜನ ಸಂಗ್ರಾಮ ಪರಿಷತ್ ನೇತೃತ್ವದಲ್ಲಿ ನಿವಾಸಿಗಳು ಭಾನುವಾರ ಹಾಸನಕ್ಕೆ ಪಾದಯಾತ್ರೆ ಆರಂಭಿಸಿದರು.

ಅನಕೃ ವೃತ್ತದಲ್ಲಿ ಜಮಾಯಿಸಿದ ನಿವಾಸಿಗಳು ಮದ್ಯದ ಅಂಗಡಿ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಯತ್ತ ಪಾದಯಾತ್ರೆ ಬೆಳೆಸಿದರು.

ಪಾದಯಾತ್ರೆ ನೇತೃತ್ವ ವಹಿಸಿರುವ ಪರಿಷತ್ ಕಾರ್ಯದರ್ಶಿ ಜಗದೀಶ್ ಮಾತನಾಡಿ, ‘ಮಲ್ಲಿಪಟ್ಟಣ ರಸ್ತೆಯಲ್ಲಿ ಮದ್ಯದಂಗಡಿ ತೆರೆದಿರುವ ಪರಿಣಾಮ ಮಹಿಳೆಯರು, ಮಕ್ಕಳ ಓಡಾಟಕ್ಕೆ ತೊಂದರೆಯಾಗಿದೆ. ಇಲ್ಲಿ ವಾಸಿಸುವ ನಿವಾಸಿಗಳು ಮಾನಸಿಕವಾಗಿ ಕಿರಿಕಿರಿ ಅನುಭವಿಸುವಂತಾಗಿದೆ. ಬಹಳಷ್ಟು ಕೂಲಿ ಕಾರ್ಮಿಕರು, ಬಡಕುಟುಂಬಗಳು ವಾಸಿಸುವ ಇಲ್ಲಿ ಮದ್ಯದ ಅಂಗಡಿ ತೆರೆದಿರುವುದು ಖಂಡನೀಯ, ಸರ್ಕಾರ ಎಲ್ಲೆಂದರಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲು ಪರವಾನಗಿ ನೀಡುತ್ತಿದೆ’ ಎಂದು ಆರೋಪಿಸಿದರು.

‘ಮದ್ಯದ ಅಂಗಡಿಗೆ ಅನುಮತಿ ನೀಡದಿರುವಂತೆ ಶಾಸಕರು, ಜಿಲ್ಲಾಧಿಕಾರಿ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶಾಸಕರು ಮತ್ತು ಜಿಲ್ಲಾಧಿಕಾರಿಯವರು ಮಾತಿಗೆ ತಪ್ಪಿದ್ದು, ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿಲ್ಲ. ಮದ್ಯದಂಗಡಿ ಪರವಾನಗಿ ರದ್ದುಪಡಿಸುವ ತನಕ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.

ಮಹಿಳೆಯರೂ ಸೇರಿದಂತೆ ಸುಮಾರು 10 ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು