ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ವಿದ್ಯಾರ್ಥಿಗಳ ಹೋರಾಟಕ್ಕೆ ಜೆಡಿಎಸ್ ಸಾಥ್‌

, ಬಿಗುವಿನ ವಾತಾವರಣ, ಬಿಗಿ ಪೊಲೀಸ್‌ ಬಂದೋಬಸ್ತ್
Last Updated 30 ಏಪ್ರಿಲ್ 2022, 15:32 IST
ಅಕ್ಷರ ಗಾತ್ರ

ಹಾಸನ: ವಿವಾದ ಕೇಂದ್ರವಾಗಿರುವ ಟ್ರಕ್‌ ಟರ್ಮಿನಲ್‌ ಕಾಮಗಾರಿನಿಲ್ಲಿಸುವಂತೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಕೈಗೊಂಡ ಪ್ರತಿಭಟನೆಯಲ್ಲಿಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಭಾಗಿಯಾಗುವ ಮೂಲಕ ರಾಜಕೀಯ ಸ್ವರೂಪಪಡೆದುಕೊಂಡಿತು.

ನಗರದ ಹೊರವಲಯದ ಹೇಮ ಗಂಗೋತ್ರಿ ಸಮೀಪ ನಿರ್ಮಿಸುತ್ತಿರುವಕಾಮಗಾರಿ ನಿಲ್ಲಿಸುವಂತೆ ಶನಿವಾರ ವಿದ್ಯಾರ್ಥಿಗಳು ಮತ್ತು ಕೆಂಚಟ್ಟಹಳ್ಳಿ
ನಿವಾಸಿಗಳು ಮುಂದಾದರು. ಆಗ ಗ್ರಾಮಸ್ಥರು ಮತ್ತು ಬಿಜೆಪಿ ಕಾರ್ಯಕರ್ತರನಡುವೆ ಮಾತಿನ ಚಕಮಕಿ ನಡೆಯಿತು.

ಕೆಂಚಟ್ಟಹಳ್ಳಿ ಹಾಗೂ ಸುತ್ತಮುತ್ತಲಿನ ಮಹಿಳೆಯರು ತಮಗೆ ಈ ಭೂಮಿಯನ್ನುವಸತಿ ಉದ್ದೇಶಕ್ಕೆ ಬಿಟ್ಟುಕೊಡುವಂತೆ ಆಗ್ರಹಿಸಿ, ಕಟ್ಟುತ್ತಿರುವ ಕಾಂಪೌಂಡ್‌ ಕೆಡವಲುಮುಂದಾದರು. ಪೊಲೀಸರು ಸಕಾಲಕ್ಕೆ ಬಂದು ತಡೆದರು. ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ನಂತರ ಗ್ರಾಮಸ್ಥರು ಸ್ಥಳದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರೂ ಕಾಮಗಾರಿ ಪ್ರಾರಂಭಿಸಲು ಗುತ್ತಿಗೆದಾರರು ಮುಂದಾದರು.ಸ್ಥಳಕ್ಕೆ ಬಂದ ರೇವಣ್ಣ ಅವರುಕೆಲಸ ಸ್ಥಗಿತಗೊಳಿಸುವಂತೆ ಸೂಚಿಸಿದರು. ಆದರೂ ಕಾಮಗಾರಿ ಮುಂದುವರಿಸಲು ಹೋದಾಗ ಪಟ್ಟು ಬಿಡದೇ ಗ್ರಾಮಸ್ಥರೊಂದಿಗೆಧರಣಿ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.

ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ಗೌಡ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್.ನಂದಿನಿ ಅವರು ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ.

ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸಂಸದ ಪ್ರಜ್ವಲ್ ರೇವಣ್ಣ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ಕೆಲಸ ನಿಲ್ಲಿಸಿ, ಇಲ್ಲವಾದರೆ ನಾವೇನಿಲ್ಲಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ‘ಟ್ರಕ್‌ ಟರ್ಮಿನಲ್‌ಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಉಸ್ತುವಾರಿ ಸಚಿವ ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದೆ. ಕಾಮಗಾರಿ ನಿಲ್ಲಿಸಲು ಸೂಚನ ನೀಡಲಾಗಿದೆ ಎಂದು ಹೇಳಿದ್ದಾರೆ. ಆದರೂ ಕೆಲಸ ನಡೆಯುತ್ತಿದೆ. ಶಿಕ್ಷಣ ಸಂಸ್ಥೆ ಸಮೀಪ ಟರ್ಮಿನಲ್‌ ಒಳ್ಳೆಯದಲ್ಲ. ಇದಕ್ಕೆ ಅವಕಾಶ ನೀಡುವುದಿಲ್ಲ. ಕಾಮಗಾರಿ ನಿಲ್ಲಿಸದಿದ್ದರೆ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಯೇ ಹೊಣೆ’ ಎಂದು ಎಚ್ಚರಿಸಿದರು.

ಸಂಜೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರನ್ನು ಭೇಟಿ ಮಾಡಿದ ರೇವಣ್ಣ, ಪ್ರಜ್ವಲ್‌ ರೇವಣ್ಣ ಅವರು ಕೆಲಸ ನಿಲ್ಲಿಸಬೇಕು ಮತ್ತು ಸ್ಥಳದಲ್ಲೇ 144 ಸೆಕ್ಷನ್‌ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT