ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ 3.30 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಎಡಿಸಿ ಕವಿತಾ ರಾಜಾರಾಂ
Last Updated 6 ಡಿಸೆಂಬರ್ 2022, 4:41 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ 1 ರಿಂದ 15 ವರ್ಷದೊಳಗಿನ 3.30 ಲಕ್ಷ ಮಕ್ಕಳಿಗೆ ಮಿದುಳು ಜ್ವರ ತಡೆಗಟ್ಟುವ ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಲಸಿಕ ಅಭಿಯಾನ ಸೋಮವಾರ ಆರಂಭವಾಗಿದ್ದು, ಮೂರು ವಾರಗಳ ಕಾಲ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ತಿಳಿಸಿದರು.

ಸೋಮವಾರ ನಗರದ ಹಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾರಣಾಂತಿಕ ಆಗಬಲ್ಲ ಮಿದುಳು ಜ್ವರ ತಡೆಯುವ ನಿಟ್ಟಿನಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಅಭಿಯಾನದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ಉಚಿತವಾಗಿ ಹಾಕಲಾಗುತ್ತಿದೆ. ಪೋಷಕರು ಕಡ್ಡಾಯವಾಗಿ ಲಸಿಕೆ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳನ್ನು ಮಿದುಳು ಜ್ವರದಿಂದ ರಕ್ಷಿಸಬೇಕು ಎಂದು ಮನವಿ ಮಾಡಿದರು.

ಹಿಮ್ಸ್ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಿದುಳು ಜ್ವರ ಬರದಂತೆ ತಡೆಯಲು ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದರು.

ನುರಿತ ಸಿಬ್ಬಂದಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಶಾಲಾಗಳಿಗೆ ತೆರಳಿ ಲಸಿಕೆ ಹಾಕಲಿದ್ದಾರೆ. ಮೊದಲ ವಾರದಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ನೀಡಲಾಗುವುದು. ಮುಂದಿನ ಎರಡು ವಾರಗಳಲ್ಲಿ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾ ಅಭಿಯಾನ ನಡೆಸಲಾಗುವುದು. ಈ ಅಭಿಯಾನಕ್ಕೆ ಬೆಂಬಲವಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಜೆನ್ವಾಕ್ ಲಸಿಕೆಯನ್ನು ಪೂರೈಸಲಿದೆ ಎಂದು ಹೇಳಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸತೀಶ್, ಡಾ. ಪ್ರವೀಣ್, ಆರ್‌ಎಂಒ ಡಾ.ಪ್ರಸನ್ನಕುಮಾರ್, ಡಿಎಸ್ಒ ಡಾ.ಶಿವಶಂಕರ್, ಡಾ‌‌.ಹರೀಶ್, ಡಾ. ಶ್ರೀಧರ್, ಡಾ.ವಿಜಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT