ಜಿಲ್ಲೆಯಲ್ಲಿ ಅಕಾಲಿಕ ಮಳೆ

ಹಾಸನ: ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಅಕಾಲಿಕ ಮಳೆಯಾಗಿದೆ.
ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು ಅರ್ಧ ತಾಸು ಹದ ಮಳೆ ಸುರಿದರೇ, ಆಲೂರು, ಹಳೇಬೀಡು, ಬೇಲೂರು ಪಟ್ಟಣದಲ್ಲಿ ಗುಡುಗು ಸಹಿತ ಮಳೆ ಸುರಿಯಿತು.
ಕೊಣನೂರು ಹೋಬಳಿಯ ಕೆಲ ಗ್ರಾಮಗಳಲ್ಲಿ ತುಂತುರು ಮಳೆಯಾಗಿದ್ದು, ಬಾಣವಾರದಲ್ಲಿ ಮೋಡ ಕವಿದ ವಾತಾವರಣ ಇದೆ. ಮಳೆಯಿಂದಾಗಿ ತಳ್ಳುಗಾಡಿ, ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆಯಾಯಿತು.
ಕೆಲವರು ಮಳೆಯಲ್ಲಿ ತೊಯ್ದುಕೊಂಡು ಮನೆಗೆ ಹೋದರು. ಹಲವರು ಕಟ್ಟಡ ಹಾಗೂ ಮರಗಳ ಕೆಳಗೆ ನಿಂತರು. ಬಿಸಿಲಿನಿಂದ ಬಸವಳಿದಿದ್ದ ಇಳೆ ಕೊಂಚ ತಂಪಾಯಿತು.
ಬರಹ ಇಷ್ಟವಾಯಿತೆ?
0
0
0
2
0
0 comments
View All