ಲೋಕಸಭೆಗೆ ಅಭ್ಯರ್ಥಿ ಪ್ರಕಟ: ಪ್ರಜ್ವಲ್‌ ಸಂತಸ

7
ಜಿಲ್ಲೆಯಲ್ಲಿ ಜೆಡಿಎಸ್‌ಗೆ ಉತ್ತಮ ವಾತಾವರಣ

ಲೋಕಸಭೆಗೆ ಅಭ್ಯರ್ಥಿ ಪ್ರಕಟ: ಪ್ರಜ್ವಲ್‌ ಸಂತಸ

Published:
Updated:
Prajavani

ಹಾಸನ: ‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಸಂಸದ ಎಚ್.ಡಿ.ದೇವೇಗೌಡ ಪ್ರಕಟಿಸಿರುವುದು ಸಂತಸ ತಂದಿದೆ’ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.

‘ದೇವೇಗೌಡರು ಜಿಲ್ಲೆಯ ಎಲ್ಲಾ ಶಾಸಕರು, ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಅಭ್ಯರ್ಥಿ ಹೆಸರು ತಿಳಿಸಿದ್ದು, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಬೇಲೂರು, ಹಾಸನ, ಹೊಳೆನರಸೀಪುರ ತಾಲ್ಲೂಕಿನಲ್ಲಿ ಎಲ್ಲಾ ವರ್ಗದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಜೆಡಿಎಸ್ ಗೆ ಉತ್ತಮವಾದ ವಾತವರಣವಿದೆ’ ಎಂದರು.

ಕಾಂಗ್ರೆಸ್ ಮುಖಂಡ ಎ.ಮಂಜು ಅವರು ಹಾಸನ ಅಥವಾ ಮಂಡ್ಯ ಲೋಕಸಭೆ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ದೇವೇಗೌಡರು, ಕುಮಾರಣ್ಣ, ರಾಹುಲ್ ಗಾಂಧಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದನಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !