‘ಸಾಹಿತ್ಯ ಪರಿಷತ್ ಆಹ್ವಾನ ತಲುಪುತ್ತಿಲ್ಲ’
‘ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳು ಎಲ್ಲರಿಗೂ ತಲುಪುತ್ತಿಲ್ಲ. ನನಗಂತೂ ಬರುತ್ತಿಲ್ಲ. ಯಾವ ವಿದ್ಯಮಾನಗಳು ತಿಳಿಯುತ್ತಿಲ್ಲ’ ಎಂದು ಶೂದ್ರ ಶ್ರೀನಿವಾಸ ಅಸಮಾಧಾನ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ‘ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ 4 ಲಕ್ಷಕ್ಕೂ ಅಧಿಕ ಸದಸ್ಯರಿದ್ದು ವೈಯಕ್ತಿಕವಾಗಿ ಆಹ್ವಾನ ಪತ್ರಿಕೆ ತಲುಪಿಸುವುದು ಕಷ್ಟವಾಗುತ್ತಿದೆ. ಹಾಗಾಗಿ ತಂತ್ರಜ್ಞಾನವನ್ನು ಬಳಸಿಕೊಂಡು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಪ್ರತಿಯೊಂದು ಮಾಹಿತಿ ನೀಡುತ್ತಿದ್ದೇವೆ’ ಎಂದು ಹೇಳಿದರು.