ಚನ್ನರಾಯಪಟ್ಟಣ: ವಾಣಿಜ್ಯ ಮಳಿಗೆಗಳಲ್ಲಿ ಕನ್ನಡದಲ್ಲಿ ನಾಮಫಲಕ ಅಳವಡಿಸದಿದ್ದರೆ ಅಂಥ ಮಳಿಗೆಗೆ ₹10 ಸಾವಿರ ದಂಡ ವಿಧಿಸಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ತಾಲ್ಲೂಕು ಆಡಳಿತದ ವತಿಯಿಂದ ಇಲ್ಲಿನ ಮಾಧ್ಯಮಿಕ ಶಾಲಾ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕನ್ನಡ ನಾಡು, ನುಡಿಗೆ ನಾವು ಆದ್ಯತೆ ನೀಡಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮಹತ್ವ ನೀಡಬೇಕು’ ಎಂದರು.

‘ಕನ್ನಡ ಪ್ರಾಚೀನ ಭಾಷೆ. ತನ್ನದೇ ಇತಿಹಾಸ ಹೊಂದಿದೆ. ಶಾಲೆಗಳಲ್ಲಿ ಕನ್ನಡಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳಬೇಕು. ವ್ಯಾಕರಣಬದ್ದ ಕನ್ನಡ ಕಲಿಸಲು ಶಿಕ್ಷಕರು ಒತ್ತು ನೀಡಬೇಕು’ ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಜಿ.ಎಸ್. ಶಂಕರಪ್ಪ ಮಾತನಾಡಿ, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ವಿವಿಧ ಕ್ಷೇತ್ರದ ಸಾಧಕರು ಮತ್ತು ಎಸ್ ಎಸ್ ಎಲ್ಸಿ ಯಲ್ಲಿ 125 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪುರಸಭಾಧ್ಯಕ್ಷ ಸಿ.ಎನ್. ಮೋಹನ್, ಉಪಾಧ್ಯಕ್ಷೆ ಕವಿತಾ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್. ವೆಂಕಟೇಶ ಮೂರ್ತಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎನ್. ಲೋಕೇಶ್, ಕ್ಷೇತ್ರಶಿಕ್ಷಣಾಧಿಕಾರಿ ಎಚ್.ಎನ್. ದೀಪಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲ್.ಪಿ. ಪ್ರಕಾಶ್ಗೌಡ, ತಾಲ್ಲೂಕು ಪಂಚಾಯಿತಿ ಇ.ಒ ಜಿ.ಆರ್. ಹರೀಶ್, ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಎನ್. ಮಂಜುನಾಥ್, ಸ್ಥಳೀಯ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್. ಮೂರ್ತಿ ಭಾಗವಹಿಸಿದ್ದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಅಧಿಕಾರಿಗಳು, ಕನ್ನಡಪರ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.