ಬೇಲೂರು ತಾಲ್ಲೂಕಿನ ಕಾಫಿ ತೋಟದಲ್ಲಿ ಠಿಕಾಣಿ ಹೂಡಿರುವ ಕಾಡಾನೆ ಹಿಂಡು.
ಪ್ರಮುಖ ಬೇಡಿಕೆಗಳಿಗೆ ಸ್ಪಂದನೆ: ಶ್ರೇಯಸ್
ಜಿಲ್ಲೆಯ ಪ್ರಮುಖ ಬೇಡಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯವ ಸಂಬಂಧ ಭದ್ರಾ ಅಭಯಾರಣ್ಯದಲ್ಲಿ ಆನೆಧಾಮ ನಿರ್ಮಾಣಕ್ಕೆ ಆರಂಭಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹20 ಕೋಟಿ ಅನುದಾನ ನೀಡಿದ್ದಾರೆ ಎಂದರು. ಆನೆ ದಾಳಿಯಿಂದ ಜೀವ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕು ಎಂದು ಹಾಸನ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಮಳೆಗಾಲ ಸಂದರ್ಭದಲ್ಲಿ ಭೂಕುಸಿತ ತಡೆಗೆ ತಡೆಗೋಡೆ ನಿರ್ಮಿಸಲು ₹200 ಕೋಟಿ ಕೊಟ್ಟಿದ್ದಾರೆ. ಹಾಸನ ಮಹಾನಗರಪಾಲಿಕೆಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಹಾಸನ ವಿಮಾನ ನಿಲ್ದಾಣಕ್ಕೆ ಮುಂದುವರಿದ ಅನುದಾನದಡಿ ಹಣ ಸಿಗಲಿದೆ ಎಂದರು. ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ₹9 ಕೋಟಿ ನೀಡಿದ್ದು ಮುಂದೆ ₹30 ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ರಾಜ್ಯವ್ಯಾಪಿ ಜಾರಿಗೊಳಿಸಲು ಘೋಷಣೆ ಮಾಡಿರುವ ಯೋಜನೆಗಳು ನಮ್ಮ ಜಿಲ್ಲೆಗೂ ಸಿಗಲಿವೆ ಎಂದು ಹೇಳಿದರು.