ಹಿರೀಸಾವೆ: ‘ಸರ್ಕಾರದ ವಿವಿಧ ಯೋಜನೆಯಲ್ಲಿನ ಕಾಮಗಾರಿಗಳಲ್ಲಿ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳಬೇಕು. ಇದರಿಂದ ಜನರಿಗೆ ಅನುಕೂಲವಾಗುವುದರ ಜತೆಗೆ, ಸರ್ಕಾರದ ಹಣವೂ ಉಳಿತಾಯವಾಗಲಿದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಇಲ್ಲಿನ ಹೆಬ್ಬಾರಮ್ಮ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಿರೀಸಾವೆ ಗ್ರಾಮ ಪಂಚಾಯಿತಿಗೆ ₹ 1.60 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ತೂಬಿನಕೆರೆ, ಕೊಳ್ಳೆನಹಳ್ಳಿ ಗ್ರಾಮಗಳ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ₹ 20 ಲಕ್ಷ ಅನುದಾನ ನೀಡಲಾಗಿದೆ. ಉಳಿದ ಅನುದಾನವನ್ನು ರಸ್ತೆಗಳ ಅಭಿವೃದ್ಧಿಗೆ ನೀಡಲಾಗಿದೆ’ ಎಂದರು.

‘ನರೇಗಾ ಅಡಿ ₹ 6 ಕೋಟಿ ವೆಚ್ಚದಲ್ಲಿ ಗ್ರಾಮದ ಪ್ರಮುಖ ಭಾಗದಲ್ಲಿನ ಚರಂಡಿ ನಿರ್ಮಾಣ ಮಾಡಲಾಗಿದೆ. ಪಿಎಂಶ್ರೀ ಶಾಲೆಯಿಂದ ಪದವಿ ಕಾಲೇಜುವರೆಗೆ ಶೈಕ್ಷಣಿಕ ಸೌಲಭ್ಯ ಒದಗಿಸಲಾಗಿದೆ. ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಜಾಗ ನಿಗದಿಪಡಿಸಲಾಗಿದೆ, ಆದಕ್ಕೆ ಎಲ್ಲರೂ ಸಹಕಾರ ನೀಡಿದರೆ, ಮುಂದಿನ ದಿನಗಳಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ಹೇಳಿದರು.

ಬೆಂಗಳೂರು–ಮಂಗಳೂರು ನಡುವೆಸಂಚರಿಸುವ ಎರಡು ರೈಲುಗಳನ್ನು ಗ್ರಾಮದಲ್ಲಿ ನಿಲುಗಡೆ ಮಾಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಮುಖಂಡರಾದ ಎಚ್.ಜಿ. ರಾಮಕೃಷ್ಣ, ಕೆ.ಬಿ. ಉದಯಕುಮಾರ್, ರವಿಕುಮಾರ್, ಪಿಎಸಿಸಿಬಿ ಅಧ್ಯಕ್ಷ ಮಹೇಶ್, ನಿರ್ದೇಶಕರಾದ ಬೋರಣ್ಣ, ಮಂಜುನಾಥ್, ಬೋರೇಗೌಡ, ಆರ್.ಕೆ.ಮಂಜುನಾಥ್, ಶ್ರೀಧರ್, ಬೋರೇಗೌಡ, ಚೇತನ್, ರೋಡ್ ಮಂಜುನಾಥ್, ಪರಮೇಶ್, ಸಂಜು, ಎಚ್.ಜಿ. ಮಂಜುನಾಥ್, ಕಾಂತರಾಜು, ಮನು, ತೂಬಿನಕೆರೆ ಶಂಕರ್, ನಿವೃತ್ತ ಶಿಕ್ಷಣಾಧಿಕಾರಿ ದೇವರಾಜು, ಕುಂಬೇಶ್ವರ ಸ್ವಾಮಿ ಸೇವಾ ಸಮಿತಿಯ ಕುಮಾರ್, ಶ್ರೀನಿವಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-36-1391635635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.