ಹೆತ್ತೂರು (ಹಾಸನ): ಹೋಬಳಿ ವ್ಯಾಪ್ತಿಯ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ರಾಜ್ಯ ಹೆದ್ದಾರಿ -85ರಲ್ಲಿ ಬಿಸಿಲೆ ಘಾಟ್ನ ಅಡ್ಡಹೊಳೆ ಸಮೀಪ ಭೂಕುಸಿತ ಸಂಭವಿಸಿದೆ.

ಭಾರೀ ಪ್ರಮಾಣದ ಮಣ್ಣು, ಕಲ್ಲುಗಳು 7 ಗಂಟೆ ವೇಳೆಗೆ ರಸ್ತೆಗೆ ಬಿದ್ದಿದ್ದು, ಸಂಚಾರ ಸ್ಥಗಿತಗೊಂಡಿತ್ತು. ಬಿಸಿಲೆ –ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ 2 ಗಂಟೆ ಕಾಲ ಸಂಚಾರ ಸ್ಥಗಿತವಾಗಿತ್ತು.

ಲೋಕೋಪಯೋಗಿ, ಅರಣ್ಯ ಇಲಾಖೆ ಸಿಬ್ಬಂದಿಯು ಸ್ಥಳೀಯರ ಸಹಾಯದಿಂದ ತುರ್ತು ಕಾರ್ಯಾಚರಣೆ ನಡೆಸಿ, ಮಣ್ಣು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕೊಡಗು– ಮಳೆ ಬಿರುಸು
ಮಡಿಕೇರಿ: ಕೊಡಗು ಜಿಲ್ಲಾ ಕೇಂದ್ರ, ನಾಪೋಕ್ಲು, ಸಂಪಾಜೆ, ಶಾಂತಳ್ಳಿ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಬುಧವಾರ ಬಿರುಸಿನ ಮಳೆಯಾಗಿದೆ.

ಸಂಪಾಜೆಯಲ್ಲಿ 8.5 ಸೆಂ.ಮೀ, ಭಾಗಮಂಡಲ 5.8, ಶಾಂತಳ್ಳಿ 4.7, ಮಡಿಕೇರಿ 3.7, ಸೋಮವಾರಪೇಟೆಯಲ್ಲಿ 3.5 ಸೆಂ.ಮೀನಷ್ಟು ಮಳೆಯಾಗಿದೆ.

ಮುಳ್ಳಯ್ಯನಗಿರಿ: ‘ಸದ್ಯ ಪ್ರವಾಸ ಬೇಡ’

ಚಿಕ್ಕಮಗಳೂರು ವರದಿ: ಮುಳ್ಳಯ್ಯನಗಿರಿ ಮತ್ತು ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ರಸ್ತೆಯಲ್ಲಿ ವಿವಿಧೆಡೆ ಮಣ್ಣು ಕುಸಿದಿದ್ದು, ಸೆ.14ರವರೆಗೆ ಪ್ರವಾಸಿಗರು ಭೇಟಿ ನೀಡದಂತೆ ಜಿಲ್ಲಾಡಳಿತ ಸಲಹೆ ನೀಡಿದೆ.

‘ವಾಹನಗಳ ಸಂಖ್ಯೆ ಹೆಚ್ಚಾದರೆ ಮತ್ತಷ್ಟು ಭೂಕುಸಿತದ ಸಾಧ್ಯತೆ ಇದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಂಸ್ಟೆ, ರೆಸಾರ್ಟ್ಗಳಲ್ಲಿ ಕೊಠಡಿ ಕಾಯ್ದಿರಿಸಿರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.