ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆನರಸೀಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Published 29 ಡಿಸೆಂಬರ್ 2023, 12:56 IST
Last Updated 29 ಡಿಸೆಂಬರ್ 2023, 12:56 IST
ಅಕ್ಷರ ಗಾತ್ರ

ಹೊಳೆನರಸೀಪುರ: ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಟಿ.ಎ. ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಓಹಿಲೇಶ್ ಹೇಳಿದರು.

ವೇದಿಕೆ ಗಾಂಧಿ ವೃತ್ತದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪೊಲೀಸರು ಹಾಗೂ ಸರ್ಕಾರದ ವಿರುದ್ ಹೋರಾಟಗಾರರು ಘೋಷಣೆ ಕೂಗಿದರು. ಹಾಸನ ಮೈಸೂರು ರಸ್ತೆಯಲ್ಲಿರುವ ಕನಕ ಭವನದಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ನಂತರ ತಾಲ್ಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ವೇದಿಕೆಯ ತಾಲ್ಲೂಕು ಯುವ ಘಟಕದ ಅಧ್ಯಕ್ಷ ನವೀನ್‍ಕುಮಾರ್, ಬಿ.ಆರ್. ರೇವಣ್ಣ, ಎಚ್.ಟಿ. ವೆಂಕಟಸ್ವಾಮಿ, ಎಂ.ಎನ್. ಪುಟ್ಟರಾಜು, ಚಂದ್ರಶೇಖರ್, ಎಸ್.ಕೆ. ಕುಮಾರನಾಯಕ್, ಚಂದ್ರಶೇಖರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT