ಭಾನುವಾರ, ಸೆಪ್ಟೆಂಬರ್ 19, 2021
24 °C
76 ವಿದ್ಯಾರ್ಥಿಗಳು ಗೈರು

ಹಾಸನ: ಕೋವಿಡ್‌ ಆರೈಕೆ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಮೂವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕೋವಿಡ್‌ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಸುಗಮವಾಗಿ ನಡೆಯಿತು. ಮೊದಲ ದಿನ 76 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಜಿಲ್ಲೆಯಲ್ಲಿ ಒಟ್ಟು 20,826 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್‌ ವಿತರಿಸಲಾಯಿತು. ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮೂಲಕ ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಪರೀಕ್ಷಿಸಲಾಯಿತು. ಕೊರೊನಾ ಸೋಂಕಿತ ಮೂವರು ವಿದ್ಯಾರ್ಥಿಗಳು ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆದರು.

ಪರೀಕ್ಷಾ ಕೇಂದ್ರಗಳ ಹೊರ ಭಾಗದಲ್ಲಿ ನಾಮಫಲಕ ಅಳವಡಿಸಿ ನೋಂದಣಿ ಸಂಖ್ಯೆ ನಮೂದಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಗುಂಪುಗೂಡದಂತೆ ತಿಳಿವಳಿಕೆ ನೀಡಿ ಪರೀಕ್ಷಾ ಸಿಬ್ಬಂದಿ ಒಳಗೆ ಕಳಿಸಿದರು. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು.

ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದ 127 ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗಿತ್ತು. ಬೆಳಿಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದರು. ಪರೀಕ್ಷಾ ಕೊಠಡಿಯಲ್ಲೇ ಕುಳಿತು ಮಕ್ಕಳು ಅಧ್ಯಯನದಲ್ಲಿ ತೊಡಗಿದ್ದರು. ಪರೀಕ್ಷೆಗೆ ಅರ್ಧಗಂಟೆ ಇದ್ದಾಗ ಮಕ್ಕಳು ಪುಸ್ತಕಗಳನ್ನು ಹೊರಗಿಟ್ಟು ಪರೀಕ್ಷೆ ಬರೆಯಲು ಸಜ್ಜಾದರು.

‘ಮೊದಲ ದಿನ ಸುಗಮವಾಗಿ ಪರೀಕ್ಷೆ ನಡೆದಿದೆ. ಪರೀಕ್ಷೆಗೂ ಮೊದಲೇ ಕೊಠಡಿಗಳನ್ನು ಸೈನಿಟೈಸ್‌ ಮಾಡಲಾಗಿತ್ತು. ಜ್ವರ, ಶೀತ, ಕೆಮ್ಮು ಇತರೆ ರೋಗ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕಾರ್ಯಕ್ಕೆ 3765 ಸಿಬ್ಬಂದಿ ನಿಯೋಜಿಸಲಾಗಿತ್ತು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್.ಪ್ರಕಾಶ್ ತಿತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಶಾಸಕ ಪ್ರೀತಂ ಜೆ.ಗೌಡ ಭೇಟಿ ನೀಡಿ ವಿದ್ಯಾರ್ಥಿಗಳ ಸುರಕ್ಷತೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ನಗರದ ಗಂಧದಕೋಠಿ ಪ್ರೌಢಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶ ಕೆ.ಎಸ್.ಪ್ರಕಾಶ್ ಅವರೊಂದಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು