ಕೈಗಾರಿಕೆ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ

7

ಕೈಗಾರಿಕೆ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ

Published:
Updated:
Deccan Herald

ಹಾಸನ : ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಮಿ ಲಭ್ಯವಿಲ್ಲದ ಕಾರಣ ವಿಶೇಷ ಆರ್ಥಿಕ ವಲಯದಲ್ಲಿರುವ ಭೂಮಿ ಡಿನೋಟಿಫೈ ಮಾಡುವುದು ಅತ್ಯವಶ್ಯಕ. ಜತೆಗೆ ಕೈಗಾರಿಕೆ ಅಭಿವೃದ್ಧಿಗೆ ಮೂಲ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಕೆಐಎಡಿಬಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉನ್ನತಾಧಿಕಾರದ ಏಕಗವಾಕ್ಷಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಿಮ್ಮನಹಳ್ಳಿ ಕೈಗಾರಿಕಾ ಪ್ರದೇಶದ ರಸ್ತೆಗಳು ಸಂಪೂರ್ಣ ದುರಸ್ತಿಯಲ್ಲಿದ್ದು, ಬೀದಿ ದೀಪಗಳು ಹಾಳಾಗಿರುವುದರಿಂದ ಕೈಗಾರಿಕಾ ಪ್ರದೇಶದಲ್ಲಿ ಓಡಾಡುವುದು ಹಾಗೂ ತೀವ್ರ ಅನಾನುಕೂಲ ಉಂಟಾಗಿರುವ ಬಗ್ಗೆ ಚರ್ಚಿಸಿದರು.

ಹಾಸನ ನಗರ ಜನರಿಗೆ ಕುಡಿಯುವ ನೀರು ಪೂರೈಸುತ್ತಿರುವ ಕೆಐಎಡಿಬಿ ಗೆ ಹಣ ಪಾವತಿಸುವಂತೆ ನಗರಸಭೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು.

ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ಜವಳಿ ಘಟಕಗಳಿಗೆ ಸಹಾಯಧನ ಮಂಜೂರಾತಿಗೆ ಯೋಜನೆ ರೂಪಿಸಿರುವುದನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳು ವಿವರಿಸಿದರು.

ಈ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿ, ಮೆ:ಮಾಡ್ರೈ ಟ್ರೆಂಡ್ಸ್ ಪ್ರೈ.ಲಿ., ಸಿದ್ಧ ಉಡುಪು ತಯಾರಿಕಾ ಘಟಕದ ₹ 7.76 ಕೋಟಿ ಯೋಜನೆಗೆ ಹಾಗೂ ಮೆ: ನವೀಲು ಫಾಬ್ರಿಕ್ಸ್ ಸೀರೆಗಳ ತಯಾರಿಕಾ ಉದ್ಯಮಕ್ಕೆ ₹ 5.67 ಕೋಟಿ ಯೋಜನೆಗೆ ಅನುಮೋದನೆ ನೀಡಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳು ಸರೋಜಿನಿ ಮಹಿಷಿ ವರದಿ ಅನ್ವಯ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ವುಡ್ ಪ್ಯಾಕರ್ಸ್ ಘಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಉಂಟಾಗಿರುವ ಗೊಂದಲಕ್ಕೆ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಂಟಿ ನಿರ್ದೇಶಕ, ಹೊಸದಾಗಿ ಉದ್ಯಮ ಸ್ಥಾಪಿಸಿರುವ ಕಾರಣ ಮೂರು ತಿಂಗಳ ನಂತರ ನೇಮಕಗೊಂಡಿರುವ ಕನ್ನಡಿಗರ ಬಗ್ಗೆ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ನೀಡಲಾಗುವುದು ಎಂದು ವಿವರಿಸಿದರು.
ಹೆದ್ದಾರಿ ಬದಿ ಮದ್ಯದಂಗಡಿ ನಡೆಸುತ್ತಿದ್ದರೆ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ರೋಹಿಣಿ ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !