ಆಲೂರು: ಸುತ್ತಲಿನ 48 ಹಳ್ಳಿಗಳಿಗೆ ಸೇರಿದ ಕೆ.ಹೊಸಕೋಟೆ ಹೋಬಳಿಯ ಹರಿಹಳ್ಳಿ ಕೆಂಚಾಂಬಾ ದೇವಿ ವರ್ಷದ ದೊಡ್ಡ ಜಾತ್ರೆ ಕಟ್ಟು ನಿಟ್ಟಿನಿಂದ ಅತ್ಯಂತ ವೈಭವ, ಭಕ್ತಿಯಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.

ಈ ಜಾತ್ರೆಯಲ್ಲಿ ಮಾತ್ರ ದೇವಿ ಪಾದ ಮುಟ್ಟಿ ನಮಸ್ಕರಿಸಲು ಅವಕಾಶವಿದ್ದರಿಂದ ನೆರೆದಿದ್ದ ಭಕ್ತರೆಲ್ಲ ದೇವಿ ಪಾದ ಮುಟ್ಟಿ ನಮಸ್ಕರಿಸಿ ಪುನೀತರಾದರು.

ಮೇ 4ರಿಂದ ಆರಂಭವಾದ ಜಾತ್ರೆಗೆ ಭಾನುವಾರ ದೊಡ್ಡ ಜಾತ್ರೆ ನಡೆಯುವುದರೊಂದಿಗೆ ನಾಂದಿ ಹಾಡಲಾಯಿತು. 48 ಹಳ್ಳಿಗೆ ಒಳಪಡುವ ಈ ಜಾತ್ರೆ ವಿಶೇಷವೆಂದರೆ ಪ್ರತಿ ಹಳ್ಳಿಗಳಲ್ಲಿ ಕೆಂಚಮ್ಮ ದೇವಿ ಮುಖ ಧರಿಸಿ ಕೂರಿಸಿ, ಪ್ರತಿದಿನ ಸಂಜೆ ದೇವರ ಉತ್ಸವ ಮತ್ತು ಸುಗ್ಗಿ ಕುಣಿತದಿಂದ ಸಂಭ್ರಮಿಸಿದರು.

ಶನಿವಾರ ರಾತ್ರಿ ಹರಿಹಳ್ಳಿ ಗ್ರಾಮದ ಮೂಲ ದೇವಸ್ಥಾನದಲ್ಲಿ ಸಪ್ತಮಾತೃಕೆಯರ ಮುಖವಾಡವನ್ನಿಟ್ಟು ರಾತ್ರಿ 10 ಗಂಟೆಯವರೆಗೆ ಅಲಂಕಾರ ಮಾಡಿ ಸುಗ್ಗಿ ಕುಣಿತ ಕುಣಿದರು. ಬೆಳಗಿನ ಜಾವ ಪ್ರತಿ ಹಳ್ಳಿಗಳಲ್ಲಿ ಮಹಿಳೆಯರು ಕಲಶ ತೆಗೆದುಕೊಂಡು, ಹೊಳೆ ಬಳಿ ತೆರಳಿ ಕೆಂಚಾಂಬಿಕೆ ದೇವಿಗೆ ಪೂಜೆ ಸಲ್ಲಿಸಿದರು. ನಂತರ ಮೆರೆ ದೇವರನ್ನು ಕೆಂಚಾಂಬಿಕೆ ದೇವಸ್ಥಾನದವರೆಗೆ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ಕರೆತಂದು ದೇವಸ್ಥಾನದಲ್ಲಿ ಕುಳ್ಳಿರಿಸಿದರು.

ಮಧ್ಯಾಹ್ನ ಒಂದು ಗಂಟೆಗೆ ಮಹಾಮಂಗಳಾರತಿ ನೆರವೇರಿತು. ನಂತರ ಅನ್ನಬಲಿ ಸಮರ್ಪಿಸಿದರು. ಭಕ್ತರು ರಾತ್ರಿ 10 ಗಂಟೆಯವರೆಗೆ ಭಕ್ತರು ದೇವಿ ಪಾದ ಮುಟ್ಟಿ ನಮಸ್ಕರಿಸಿದರು. ಪ್ರತಿ ವರ್ಷಕ್ಕಿಂತ ಈ ವರ್ಷ ಭಕ್ತರ ಸಂಖ್ಯೆ ಅಧಿಕವಾಗಿತ್ತು. ಜಾತ್ರೆಯಲ್ಲಿ ಮಣ್ಣಿನ ಮಡಕೆ ವ್ಯಾಪಾರ ಜೋರಾಗಿತ್ತು. ಜಾತ್ರೆಗೆ ಬಂದ ಪ್ರತಿಯೊಬ್ಬರೂ ಮಡಕೆ ಖರೀದಿಸಿ ಒಯ್ಯುವುದು ವಾಡಿಕೆ.

ಜಾತ್ರೆ ಆರಂಭವಾಗುವ ಒಂದು ವಾರ ಮೊದಲು 48 ಹಳ್ಳಿಗಳಲ್ಲೂ ಸುಗ್ಗಿ ಸಾರು ಹಾಕುತ್ತಾರೆ. ಸಾರು ಹಾಕಿದ ನಂತರ 48 ಹಳ್ಳಿಗಳ ವ್ಯಾಪ್ತಿಯಲ್ಲಿ ಹಸಿ ಕೊನೆ ಕಡಿಯುವಂತಿಲ್ಲ, ಮುರಿಯುವಂತಿಲ್ಲ, ಒಗ್ಗರಣೆ ಹಾಕುವಂತಿಲ್ಲ. ರೊಟ್ಟಿ ಮಾಡುವುದು, ಹೊಲಸು ಮಾಡುವುದು ನಿಷೇಧ. ಗ್ರಾಮದಿಂದ ಹೊರಗಿದ್ದವರು ಒಳಗೆ, ಊರೊಳಗಿದ್ದವರು ಹೊರಗೆ ಹೋಗುವಂತಿಲ್ಲ. ದೇವಿ ನಿಯಮ ಪಾಲಿಸದಿದ್ದರೆ ತಪ್ಪಿಗೆ ತಕ್ಕ ಶಿಕ್ಷೆ ನೀಡುವಳು ಎಂಬ ನಂಬಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ.

ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು, ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ, ತಹಶೀಲ್ದಾರ್ ಮಲ್ಲಿಕಾರ್ಜುನ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಘು ದೇವಿ ದರ್ಶನ ಪಡೆದರು. ಇನ್ಸ್ಪೆಕ್ಟರ್ ಮೋಹನರೆಡ್ಡಿ, ಸಬ್ ಇನ್ಸ್ಪೆಕ್ಟರ್ ಜನಾಬಾಯಿ ಕಡಪಟ್ಟಿ, ಕಂದಾಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ, ಕಾಡಾನೆ ಹಾವಳಿ ಎದುರಾಗದಂತೆ ಮುಂಜಾಗ್ರತೆ ವಹಿಸಿದ್ದರು. ಪ್ರಧಾನ ಅರ್ಚಕ ರಾಮಸ್ವಾಮಿ ನೇತೃತ್ವದಲ್ಲಿ ಪೂಜೆಗಳು ನಡೆದವು.

ಜಾತ್ರೆಯಲ್ಲಿ 48 ಹಳ್ಳಿಗಳಲ್ಲೂ ಸುಗ್ಗಿ ಸಾರು ದೇವಿಯ ಮುಂದೆ ಸುಗ್ಗಿ ಕುಣಿತದ ಸಂಭ್ರಮ ಜಾತ್ರೆ ವೇಳೆ ಕಟ್ಟುನಿಟ್ಟಿನ ನಿಯಮ ಪಾಲನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.