ಹಾಸನ: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವುದನ್ನು ಸ್ವಾಗತಿಸಿರುವ ಕರ್ನಾಟಕ ಮಾದಾರ ಮಹಾಸಭಾ, ಕಾಂಗ್ರೆಸ್ ನಾಯಕ ಕೆ.ಎಚ್. ಮುನಿಯಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ, ನಗರದ ಡಾ.ಅಂಬೇಡ್ಕರ್ ಪ್ರತಿಮೆ ಎದುರು ಸೋಮವಾರ ಪ್ರತಿಭಟನೆ ನಡೆಸಿತು.

ಈ ವೇಳೆ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಆರ್. ವಿಜಯ್ ಕುಮಾರ್ ಮಾತನಾಡಿ, ದಶಕಗಳಿಂದ ಪಕ್ಷದ ಕಟ್ಟಾಳುವಾಗಿ ದುಡಿದಿರುವ ಮುನಿಯಪ್ಪ ಅವರಿಗೆ ಸೂಕ್ತ ಗೌರವ ನೀಡುವ ಸಮಯ ಇದು. ಪರಿಶಿಷ್ಟ ಜಾತಿ ಎಡಗೈ ಸಮುದಾಯದಲ್ಲಿ ಅಪಾರ ಪ್ರಭಾವ ಹೊಂದಿರುವ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ₹50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯ ಸಮುದಾಯಕ್ಕೆ ನ್ಯಾಯ ಸಿಕ್ಕಂತಾಗುತ್ತದೆ ಎಂದರು.

ಕೇವಲ ಸಚಿವ ಸ್ಥಾನಕ್ಕೆ ಸೀಮಿತಗೊಳಿಸಿದರೆ ಸಮುದಾಯದಲ್ಲಿ ಅಸಮಾಧಾನ ಉಂಟಾಗಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದರು.

ಮುನಿಯಪ್ಪ ಅವರಿಗೆ ಡಿಸಿಎಂ ಹುದ್ದೆಯ ಜತೆಗೆ ಕಂದಾಯ, ಗೃಹ, ಲೋಕೋಪಯೋಗಿ, ಸಹಕಾರ ಅಥವಾ ಇಂಧನದಂತಹ ಪ್ರಮುಖ ಖಾತೆ ನೀಡಬೇಕು. ಇದರಿಂದ ಪಕ್ಷದ ಸಂಘಟನೆಗೆ ಬಲ ಬರಲಿದೆ ಎಂದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಸತೀಶ್ ಕಡಗ, ತಿರುಪತಿಹಳ್ಳಿ ಮುನಿಸ್ವಾಮಿ, ಪೊಲೀಸ್ ಶಿವಣ್ಣ, ನಾಗರಾಜು, ಭೈರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಶ್ರೀನಿವಾಸ್ಗೆ ಸಚಿವ ಸ್ಥಾನ: ಯಾದವ ಸಮಾಜ ಆಗ್ರಹ

ಹಾಸನ: ಕರ್ನಾಟಕ ರಾಜ್ಯ ಯಾದವ (ಗೊಲ್ಲ) ಸಮಾಜದ ಪ್ರಮುಖ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡುವಂತೆ ಸಮಾಜದ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರು, ರಾಜ್ಯದಲ್ಲಿ 19 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಯಾದವ (ಗೊಲ್ಲ) ಸಮುದಾಯಕ್ಕೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. ದಿವಂಗತ ಎ. ಕೃಷ್ಣಪ್ಪ ಅವರ ನಂತರ ರಾಜ್ಯ ಗೊಲ್ಲ (ಯಾದವ) ಸಂಘದ ಅಧ್ಯಕ್ಷರಾಗಿ ಚುನಾವಣೆ ಮೂಲಕ ಆಯ್ಕೆಯಾದ ಮೊದಲಿಗರು ಡಿ.ಟಿ. ಶ್ರೀನಿವಾಸ್ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ರಾಘು, ಕಾರ್ಯದರ್ಶಿ ಕೃಷ್ಣಮೂರ್ತಿ, ನಿರ್ದೇಶಕ ನಾಗೇಶ್, ಸದಸ್ಯರಾದ ಕೃಷ್ಣಪ್ಪ, ಗೋವಿಂದರಾಜ್, ಕೇಶವ್ ಗೌಡ, ನಾಗೇಶ್, ಹೊನ್ನೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-36-768211206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.