ಖರೀದಿ ಕೇಂದ್ರ ತೆರೆಯಲು ಕ್ರಮವಹಿಸಿ: ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ

7
ಬೆಂಬಲ ಬೆಲೆ ಯೋಜನೆಯಡಿ 14 ದವಸ ಧಾನ್ಯಗಳು

ಖರೀದಿ ಕೇಂದ್ರ ತೆರೆಯಲು ಕ್ರಮವಹಿಸಿ: ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ

Published:
Updated:
Deccan Herald

ಹಾಸನ: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿಗೆ 14 ದವಸ-ಧಾನ್ಯಗಳು, ಎಣ್ಣೆ ಕಾಳುಗಳು, ದ್ವಿದಳ ಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ಹೇಳಿದರು.

ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪನೆ ಕುರಿತು ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಅವರು, ಅಕ್ಟೋಬರ್‌ನಿಂದ ಪ್ರತಿ ಕ್ವಿಂಟಲ್‌ಗೆ ₹ 1750 ಬೆಂಬಲ ಬೆಲೆಯೊಂದಿಗೆ ಭತ್ತ, ₹ 1700 ದರದಲ್ಲಿ ಮೆಕ್ಕೆ ಜೋಳ, ₹ 2897 ದರದಲ್ಲಿ ರಾಗಿ ಖರೀದಿಸಲು ಕೇಂದ್ರಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರ ನಿಗದಿ ಮಾಡಿರುವ ದವಸ ಧಾನ್ಯಗಳಲ್ಲಿ ಜಿಲ್ಲೆಯಲ್ಲಿ ಭತ್ತ, ರಾಗಿ ಮತ್ತು ಮೆಕ್ಕೆ ಜೋಳ ಬೆಲೆಗಳ ಖರೀದಿಗೆ ಕೇಂದ್ರ ತೆರೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬಹುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಉಪ ನಿರ್ದೇಶಕ ಶ್ರೀಹರಿ ಹಾಗೂ ಜಂಟಿ ಕೃಷಿ ನಿರ್ದೇಶಕ ಕೆ.ಮದುಸೂಧನ್ ಅಭಿಪ್ರಾಯ ವ್ಯಕ್ತಪಡಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !