ಶನಿವಾರ, ಆಗಸ್ಟ್ 13, 2022
23 °C

ಮಗನ ಉಳಿಸಿಕೊಡಿ ಎಂದು ಅಂಗಾಲಾಚಿದ್ದ ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಸೀಕೆರೆ (ಹಾಸನ): ‘ಈ ಹಿಂದೆ ವಿಧಾನಸಭೆಯಲ್ಲಿ ರಾಜ್ಯದ ಶಾಸಕರೊಬ್ಬರು ‘ನನ್ನ ಮಗ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾನೆ. ಆದರೆ, ಡ್ರಗ್ಸ್ ಮೋಹಕ್ಕೆ ಒಳಗಾಗಿ ಜೀವನವನ್ನೇ ನಾಶಪಡಿಸಿಕೊಳ್ಳುತ್ತಿದ್ದಾನೆ. ದಯಮಾಡಿ ಡ್ರಗ್ಸ್ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಮಗನ ಜೀವ ಉಳಿಸಿಕೊಡಿ’ ಎಂದು ಅಂಗಲಾಚಿದ್ದರು’ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಅಂದಿನ ಸರ್ಕಾರ ಯಾವುದೇ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿಲ್ಲ. ಈಗಲಾದರೂ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಡ್ರಗ್ಸ್ ಜಾಲವನ್ನು ಮಟ್ಟ ಹಾಕಬೇಕು ಎಂದರು.

‘ಡ್ರಗ್ಸ್’ ಎಂಬ ನಶೆಯ ಮಾಯೆ ಬಹುಕಾಲದಿಂದ ವ್ಯಾಪಕವಾಗಿ ಹರಡಿ ಅಮಾಯಕ ಯುವಕರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಇದನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು