ಕುಶಾಲನಗರ: ಕೊಡಗು ಜಿಲ್ಲೆ ಸೇರಿ ಹಾಸನ, ಚಿಕ್ಕಮಗಳೂರು ಜಿಲ್ಲೆಗಳು ಹಾಸನ ಹಾಲು ಒಕ್ಕೂಟಕ್ಕೆ ಒಳಗೊಂಡಿದ್ದು, ಈ ಮೂರು ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿ ದಿನ 16 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದೆ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ಹೇಳಿದರು.

ಸಮೀಪದ ಶಿರಂಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸೋಮವಾರ ಏರ್ಪಡಿಸಿದ್ದ ವಿಶ್ವ ಹಾಲು ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಹೆಚ್ಚು ಹಾಲು ಸಂಗ್ರಹದಿಂದ ಹೆಚ್ಚು ಉತ್ಪನ್ನಗಳು ತಯಾರಿಸಲಾಗುತ್ತಿದೆ. ಒಕ್ಕೂಟದ ಅಧ್ಯಕ್ಷ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಈಗಾಗಲೇ ₹900 ಕೋಟಿ ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನದ ಮೆಗಾ ಡೇರಿ ಮುಂದಿನ ದಿನಗಳಲ್ಲಿ ಆರಂಭಗೊಳ್ಳಲಿದೆ. ಇದರ ಮೂಲಕ ಹಾಲು ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಜತೆಗೆ ಎಲ್ಲ ರೀತಿಯ ಸಹಕಾರವನ್ನು ಒಕ್ಕೂಟದ ವತಿಯಿಂದ ನೀಡಲಾಗುವುದು ಎಂದರು.

ನೂರಾರು ರೈತರಿಗೆ ಒಕ್ಕೂಟದ ಸಿಹಿ ಉತ್ಪನ್ನಗಳನ್ನು ನೀಡಲಾಯಿತು. ಕೂಡಿಗೆ ಡೇರಿ ವ್ಯವಸ್ಥಾಪಕ ನಂದಿಶ್, ಮಾರುಕಟ್ಟೆ ವಿಭಾಗದ ಉಪ ವ್ಯವಸ್ಥಾಪಕ ಮಲ್ಲೇಶ್, ಸಹಾಯಕ ವ್ಯವಸ್ಥಾಪಕ ಸಂತೋಷ್, ಶಿರಂಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಪಿ.ಸುರೇಶ್, ಮನುಕುಮಾರ್, ಗಂಗಾಧರ, ವಿಷಕಂಠ, ಕುಮಾರ್ ಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-850205083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.