ನುಗ್ಗೇಹಳ್ಳಿ: ‘ಮುಂಗಾರು ಮಳೆ ಆರಂಭಗೊಳ್ಳಲ್ಲಿದ್ದು, ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ರಸಗೊಬ್ಬರ ಅಭಾವ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಹೋಬಳಿಯ ದ್ಯಾವಲಪುರ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಎಫ್ಎನ್ಎಸ್ ಯೋಜನೆಯಡಿ ಅಲಸಂದೆ, ರಾಗಿ, ಗೊಬ್ಬರ ಇತರೆ ಪರಿಕರಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

‘ಕೋಲಾರ ಜಿಲ್ಲೆಯಲ್ಲಿ ರೈತರು ಕಲುಷಿತ ನೀರನ್ನು ಶುದ್ಧೀಕರಿಸಿ ತರಕಾರಿ ಬೆಳೆಯುತ್ತಾರೆ. ಆದರೆ, ನಮ್ಮ ಜಿಲ್ಲೆಯಲ್ಲಿ ಫಲವತ್ತಾದ ಮಣ್ಣಿನ ಜೊತೆಗೆ ನೀರಿನ ಸೌಲಭ್ಯವೂ ಇದೆ. ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ರೈತರು ಹೆಚ್ಚು ಲಾಭಗಳಿಸುವ ನಿಟ್ಟಿನಲ್ಲಿ ಬೀನ್ಸ್, ಮೆಣಸಿನಕಾಯಿ, ಕ್ಯಾರೆಟ್, ಬೀಟ್ರೂಟ್ ಇತರೆ ಮಿಶ್ರ ತರಕಾರಿಗಳನ್ನು ಬೆಳೆಯಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.

‘ಕೃಷಿ ಇಲಾಖೆಯಿಂದ ದ್ಯಾವಲಪುರ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಪ್ರಸ್ತುತ ಸಾಲಿನಲ್ಲಿ ಗ್ರಾಮದ 100 ರೈತರಿಗೆ ಎರಡೂವರೆ ಸಾವಿರ ಬೆಲೆಯ ಬಿತ್ತನೆಬೀಜ, ಗೊಬ್ಬರ ಉಚಿತವಾಗಿ ವಿತರಿಸಲಾಗಿದೆ. ಪ್ರಸ್ತುತ ತಾಲ್ಲೂಕಿಗೆ 13 ಸಾವಿರ ಟನ್ ರಸಗೊಬ್ಬರ ಬೇಕಾಗುತ್ತದೆ, ಸರ್ಕಾರ ಅಭಾವ ಸೃಷ್ಟಿಯಾಗುವ ಮೊದಲೇ ಅಗತ್ಯವಿರುವ ಗೊಬ್ಬರ ಪೂರೈಸಬೇಕು’ ಎಂದು ಒತ್ತಾಯಿಸಿದರು.

ಕೃಷಿ ಅಧಿಕಾರಿ ಜಿ.ವಿ. ದಿನೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಆರ್. ದೊರೆಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಿ.ಆರ್. ನಾಗೇಶ್, ಕುಳ್ಳೇಗೌಡ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್, ಮುಖಂಡರಾದ ಡಿ.ಎಚ್. ಸ್ವಾಮಿ, ಶೇಖರ್, ಡಿ.ಸಿ. ಉಮೇಶ್, ಕುಮಾರ್, ಮೂಡಲಗಿರಿಗೌಡ, ಯೋಗಾನಂದ, ರಂಗನಾಥ್, ನಾಗೇಶ್, ಕೃಷಿ ಇಲಾಖೆ ಸಿಬ್ಬಂದಿಗಳಾದ ವಿಜಯಕುಮಾರ್, ರಾಜೇಶ್ವರಿ, ಮಂಜುನಾಥ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-1246420959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.