ಹಾಸನ: ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕೊಟ್ಟೂರು ಶ್ರೀನಿವಾಸ್ (60)
ಮಂಗಳವಾರ ಸಂಜೆ ನಿಧನರಾದರು.

ಕಿಡ್ನಿ, ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗೆ ಮಂಗಳೂರಿನ ಫ಼ಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಪಡೆಯುತ್ತಿದ್ದರು. ಸೋಮವಾರ ಹೃದಯಾಘಾತಕ್ಕೆ ಒಳಗಾಗಿ, ಕೋಮಾ ಸ್ಥಿತಿಗೆ ತಲುಪಿದ್ದರು.

ಪತ್ನಿ ಪ್ರಮಿಳಾ, ಪುತ್ರಿ ರುಚಿತ ಇದ್ದಾರೆ. ಬುಧವಾರ ಹಾಸನ ತಾಲ್ಲೂಕಿನ ಬಿಟ್ಟಗೌಡನಹಳ್ಳಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ಶ್ರೀನಿವಾಸ್ ದಶಕಗಳಿಂದ ಹಾಸನದಲ್ಲಿಯೇ ನೆಲೆಸಿದ್ದರು. ದಲಿತ, ರೈತ ಸಂಘಟನೆ, ಸಾಕ್ಷರತಾ ಆಂದೋಲನಾ ಮತ್ತು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೇ ರೈತ ನಾಯಕ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರಿಂದ ಸ್ಪೂರ್ತಿ ಪಡೆದು ಹಲವು ಹೋರಾಟಗಳ ನೇತೃತ್ವ ವಹಿಸಿದ್ದರು. ಜಿಲ್ಲೆಯಲ್ಲಿ ನಡೆದ ನೀರಾ ಚಳುವಳಿ, ಆನ್ ಲೈನ್ ಲಾಟರಿ, ಪಂಪ್ ಸೆಟ್ ಮೀಟರ್ ಅಳವಡಿಕೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.