ಬಾಗೂರು (ನುಗ್ಗೇಹಳ್ಳಿ ): ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಬಾಗೂರು ಶ್ರವಣಬೆಳಗೊಳ ಹೋಬಳಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಲಾಗುತ್ತದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಹೋಬಳಿಯ ಕೇಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಹಳೇದು) ಯಲ್ಲಿ ಏವನ್ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರವೇಟ್ ಲಿಮಿಟೆಡ್ ವತಿಯಿಂದ ಹೋಬಳಿ ವ್ಯಾಪ್ತಿಯ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬ್ಯಾಗ್ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಏವನ್ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರವೇಟ್ ಲಿಮಿಟೆಡ್ ವತಿಯಿಂದ ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಯ ಸುಮಾರು 6 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ಕೊಡಲಾಗುತ್ತಿದೆ. ಕಂಪನಿಯ ಸಿಎಸ್ಆರ್ ಫಂಡ್ನಿಂದ ಈ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕೆಗೆ ಅನುಕೂಲವಾಗಲೆಂದು ಕಂಪನಿಯು ಈ ಯೋಜನೆಯನ್ನು ರೂಪಿಸಿದೆ ಎಂದರು.

ಹೋಬಳಿ ಕೇಂದ್ರದಲ್ಲಿ ಈ ಭಾಗದ ಜನರ ಒತ್ತಾಯದಂತೆ ಪ್ರಸ್ತುತ ಸಾಲಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಹೊಸದಾಗಿ ಮಂಜೂರು ಮಾಡಿಸಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭವಾಗುತ್ತದೆ ಎಲ್ಕೆಜಿಯಿಂದ ಪಿಯುಸಿ ವರೆಗೆ ಉಚಿತವಾಗಿ ಶಿಕ್ಷಣ ಸಿಗಲಿದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಮನವಿ ಮಾಡಿದರು.

ಕ್ಷೇತ್ರ ಸಮನ್ವಯ ಅಧಿಕಾರಿ ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕಂಪನಿಯು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲೆಂದು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಹೆಮ್ಮೆಯ ವಿಚಾರ ಎಂದರು.

ಏವನ್ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರವೇಟ್ ಕಂಪನಿಯ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ತೇಜಮೂರ್ತಿ ಮಾತನಾಡಿ, ಕಂಪನಿ ವತಿಯಿಂದ ಕಳೆದ ವರ್ಷ ಅರಸೀಕೆರೆ ತಾಲೂಕನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ವರ್ಷ ಚನ್ನರಾಯಪಟ್ಟಣ ತಾಲ್ಲೂಕನ್ನು ಆಯ್ಕೆ ಮಾಡಲಾಗಿದೆ. ಮುಂಬರುವ 2027ನೇ ಶೈಕ್ಷಣಿಕ ವರ್ಷದಲ್ಲಿ ಶಾಸಕರ ಒತ್ತಾಯದಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಈ ಕಾರ್ಯಕ್ರಮವನ್ನು ವಿಸ್ತರಿಸುವ ಕುರಿತು ಕಂಪನಿ ಮುಖ್ಯಸ್ಥರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಚ್. ಶಿವಣ್ಣ, ಮಾದೇಶ್ವರ ಏಜೆನ್ಸಿ ಮಾಲೀಕ ಮಧುಕರ್ ಶೆಟ್ಟಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜ್ಯೋತಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಲತೀಫ್, ಕಂಪನಿಯ ಮಾರ್ಕೆಟಿಂಗ್ ಮ್ಯಾನೇಜರ್ ಗಳಾದ ಗೌತಮ್, ರಮೇಶ್, ಮಧು, ಮುಖಂಡರಾದ ಎಲ್ಐಸಿ ಕಾಂತರಾಜ್, ಹುಲಿಕೆರೆ ಸಂಪತ್ ಕುಮಾರ್, ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿವಿಧ ಶಾಲೆಗಳ ಶಿಕ್ಷಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.