ಹಾಸನ: ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಕೃಷ್ಣ ಬೈರೇಗೌಡರನ್ನು ನಿಯೋಜಿಸಲಾಗಿದೆ. ಅಧಿಕೃತ ಆದೇಶ ಹೊರಬೀಳದೇ ಇದ್ದರೂ, ಅವರೇ ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಎನ್ನುವ ಚರ್ಚೆ ಶುರುವಾಗಿದೆ.

ಹುಡಾ ಅಧ್ಯಕ್ಷ ಸ್ಥಾನ, ಬಣ ರಾಜಕಾರಣದಿಂದ ನಲುಗಿರುವ ಜಿಲ್ಲಾ ಕಾಂಗ್ರೆಸ್ಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕೃಷ್ಣ ಸಂಧಾನ ಯಶಸ್ವಿ ಆಗಲಿದೆಯೇ ಎನ್ನುವ ಕುತೂಹಲ ಮನೆ ಮಾಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ಸೂಕ್ತ ಸ್ಥಾನಮಾನ ಸಿಗದೇ ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಸಾಕಷ್ಟು ಅಸಮಾಧಾನಗೊಂಡಿದ್ದಾರೆ. ಕೇವಲ ತಾಲ್ಲೂಕು ಗ್ಯಾರಂಟಿ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಿಸಿದ್ದು ಬಿಟ್ಟರೆ, ಹೇಳಿಕೊಳ್ಳುವ ಯಾವ ಹುದ್ದೆಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ ಎನ್ನುವ ಬೇಸರ ಮನೆ ಮಾಡಿದೆ.

ಇದರ ಜೊತೆಗೆ ಇದೀಗ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ವಿಷಯವೂ ತಾರಕಕ್ಕೆ ಏರಿದ್ದು, ಜಿಲ್ಲಾ ಕಾಂಗ್ರೆಸ್ನಲ್ಲಿ ಬಣ ರಾಜಕಾರಣ ಹೆಚ್ಚಾಗುತ್ತಿದೆ ಎನ್ನುವ ಆತಂಕವೂ ಪಕ್ಷದ ಹಿರಿಯರನ್ನು ಕಾಡುತ್ತಿದೆ.

ರಾಜ್ಯ ಸರ್ಕಾರಕ್ಕೆ ಹಾಸನ ಜಿಲ್ಲೆಯಲ್ಲಿ ಕೇವಲ ಅರಸೀಕೆರೆ ಕ್ಷೇತ್ರ ಮಾತ್ರ ಕಾಣುತ್ತಿದೆ. ಒಂದೇ ಕಡೆ ಅನುದಾನ, ಅಧಿಕಾರ ನೀಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಪ್ರಶ್ನೆ ಕಾರ್ಯಕರ್ತರದ್ದಾಗಿದೆ.

2013–2018 ರವರೆಗೆ ಇದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಂತರ ಏಳು ವರ್ಷಗಳಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗರು ಯಾವುದೇ ಅಧಿಕಾರ ಇಲ್ಲದೇ ಪಕ್ಷ ಸಂಘಟನೆ ಮಾಡಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ, ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿದ್ದಾರೆ. ಈಗಲಾದರೂ ಸರ್ಕಾರ ನಮ್ಮ ಕೆಲಸವನ್ನು ಪರಿಗಣಿಸಬೇಕು ಎನ್ನುವ ಒತ್ತಾಯ ಕಾಂಗ್ರೆಸ್ ಮುಖಂಡರದ್ದಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಕೃಷ್ಣ ಬೈರೇಗೌಡರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಹೊಣೆ ಹೊರಬೇಕಾಗಿದೆ. ಹೆಚ್ಚುತ್ತಿರುವ ಶಾಸಕ ಶಿವಲಿಂಗೇಗೌಡರ ಪ್ರಭಾವವನ್ನು ತಗ್ಗಿಸಿ, ಇಡೀ ಜಿಲ್ಲೆಯ ಮುಖಂಡರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜವಾಬ್ದಾರಿಯನ್ನೂ ಅವರು ನಿಭಾಯಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದರು.

ಜಿಲ್ಲೆಯ ಮುಖಂಡರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವ ಕೃಷ್ಣ ಬೈರೇಗೌಡರು, ಆಗಾಗ ಜಿಲ್ಲೆಗೆ ಭೇಟಿ ನೀಡುತ್ತಲೇ ಇದ್ದಾರೆ. ಇದೀಗ ಹಾಸನ ಜಿಲ್ಲೆಗೆ ಅವರನ್ನೇ ನೇಮಿಸಿದಲ್ಲಿ, ಪಕ್ಷ ಸಂಘಟನೆಗೂ ಅನುಕೂಲ ಆಗಲಿದೆ ಎನ್ನುವ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ.

ಗೌಡರ ವಿರುದ್ಧ ಹೆಚ್ಚುತ್ತಿರುವ ಆಕ್ರೋಶ

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ವಿಚಾರದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡರು ಮಧ್ಯ ಪ್ರವೇಶಿಸಿರುವುದು ಕಾಂಗ್ರೆಸ್ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ’ಹಾಸನದ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತಮ್ಮ ಕ್ಷೇತ್ರದ ಕುರುಬ ಸಮುದಾಯದ ಮುಖಂಡ ಪಟೇಲ್ ಶಿವಪ್ಪ ಅವರನ್ನು ನೇಮಿಸಲು ಶಿವಲಿಂಗೇಗೌಡರು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮಾಜದ ಮತಗಳನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ‘ಪಟೇಲ್ ಶಿವಪ್ಪ ಅವರನ್ನು ಅರಸೀಕೆರೆ ನಗರ ಯೋಜನಾ ಪ್ರಾಧಿಕಾರಕ್ಕೆ ನೇಮಿಸಿಕೊಳ್ಳಲಿ. ಅದನ್ನು ಬಿಟ್ಟು ಹಾಸನ ಕ್ಷೇತ್ರದವರಿಗೇ ಸಿಗಬೇಕಿರುವ ಹುಡಾ ಅಧ್ಯಕ್ಷ ಸ್ಥಾನದ ಬಗ್ಗೆ ತಲೆಕೆಡಿಸಿಕೊಳ್ಳಬಾರದು’ ಎಂದು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.