ಶನಿವಾರ, ಜೂನ್ 25, 2022
25 °C

ಚನ್ನಕೇಶವಸ್ವಾಮಿ ದೇಗುಲದ ಪ್ರಧಾನ ಅರ್ಚಕ‌ ಕೃಷ್ಣಸ್ವಾಮಿ ಭಟ್ಟರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಪ್ರಧಾನ ಅರ್ಚಕ ಕೃಷ್ಣಸ್ವಾಮಿ ಭಟ್ಟರ್ (ಪಾಚು ಭಟ್ಟರ್) 63 ವರ್ಷ ಮಂಗಳವಾರ ಬೆಳಿಗ್ಗೆ ತಮಿಳುನಾಡಿನ ಕಂಚಿಯಲ್ಲಿ ಹೃದಯಾಘಾತದಿಂದ ನಿಧನರಾದರು.

ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇಗುಲದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿ, ನಂತರ ಬೇಲೂರಿನ ಚನ್ನಕೇಶವ ಸ್ವಾಮಿ ದೇಗುಲದಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ. ಇಲ್ಲಿಯೇ ವಾಸವಿದ್ದರು. ತಮಿಳುನಾಡಿನ ಕಂಚಿ ರಥೋತ್ಸವದಲ್ಲಿ ಭಾಗವಹಿಸಲು ಸೋಮವಾರ ಹೋಗಿದ್ದ ಅವರು ಮಂಗಳವಾರ ಕಂಚಿಯಲ್ಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.

ಅಂತ್ಯಕ್ರಿಯೆ ಅವರ ಸ್ವಂತ ಊರಾದ ಮೇಲುಕೋಟೆಯಲ್ಲಿ ಮಂಗಳವಾರ ರಾತ್ರಿ ನೆರವೇರಿಸಲಾಗುವುದು ಎನ್ನಲಾಗಿದೆ.

ಮೃತರ ಗೌರವಾರ್ಥ ಚನ್ನಕೇಶವಸ್ವಾಮಿ ದೇಗುಲದ ಗರ್ಭಗುಡಿ ಹಾಗೂ ಅನ್ನ ದಾಸೋಹವನ್ನು ಮಂಗಳವಾರ ಬಂದ್ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.