ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ. 1 ರಂದು ಹಾಸನಕ್ಕೆ ಕೆಆರ್‌ಎಸ್ ಬೈಕ್ ಜಾಥಾ: ಉಮೇಶ್ ಬೆಳಗೊಂಬಿ

Published 27 ಫೆಬ್ರುವರಿ 2024, 13:17 IST
Last Updated 27 ಫೆಬ್ರುವರಿ 2024, 13:17 IST
ಅಕ್ಷರ ಗಾತ್ರ

ಹಾಸನ: ಕೆಆರ್‌ಎಸ್ ಪಕ್ಷದಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಜನಜಾಗೃತಿ ಬೈಕ್ ಜಾಥಾ ಹಮ್ಮಿಕೊಂಡಿದ್ದು, ಮಾರ್ಚ್ 1 ರಂದು ಜಿಲ್ಲೆಗೆ ಬರಲಿದೆ ಎಂದು ಕೆಆರ್‌ಎಸ್‌ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಬೆಳಗೊಂಬಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದುರಾಡಳಿತ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಎಸಗುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ, ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ಜನರನ್ನು ಕೋರಲು ಮತ್ತು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣದ ಕುರಿತು ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಾರ್ಚ್ 1ರಂದು ಜಿಲ್ಲೆಯ ಬೇಲೂರು, ಹಾಸನ ನಗರ, ಚನ್ನರಾಯಪಟ್ಟಣ ಮೂಲಕ ಜಾಥಾ ಸಾಗಲಿದೆ. ಜಿಲ್ಲಾ ಕೇಂದ್ರದ ಸಿಟಿ ಬಸ್ ನಿಲ್ದಾಣದ ಎದುರು ಮಧ್ಯಾಹ್ನ 3ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಈ ಜಾಥಾದಲ್ಲಿ ಕೆಆರ್‌ಎಸ್ ಪಕ್ಷದ ಎಲ್ಲ ಕಾರ್ಯಕರ್ತರು ಮತ್ತು ಪ್ರಜ್ಞಾವಂತ ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಫೆ. 19ರಂದು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರಂಭವಾದ ಬೈಕ್ ಜಾಥಾ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹೊಸಕೋಟೆ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಸಾಗಿ ಹಾಸನಕ್ಕೆ ಬರಲಿದೆ. ನಂತರ ತುಮಕೂರು ಮಾರ್ಗವಾಗಿ ಮಾರ್ಚ್ 2 ರಂದು ನೆಲಮಂಗಲದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ವಿವರಿಸಿದರು.

ಬಿ.ಕೆ ನಾಗರಾಜ್, ವಿ.ರಮೇಶ್ ಭುವನಹಳ್ಳಿ, ಅಪ್ಪಣ್ಣ, ಆದೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT