ಬೇಲೂರು: ‘ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಗೊರ್ಗಿಹಳ್ಳಿಯಲ್ಲಿ 2022ರಲ್ಲಿ ಕಾಡಾನೆಗೆ ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಚಾವ್ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ’ ಎಂದು ಕೆಆರ್ಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಆದೇಶ್ ಆರೋಪಿಸಿದರು.

ಇಲ್ಲಿನ ತಹಶೀಲ್ದಾರ್ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದ್ದು ಬಿಟ್ಟರೆ, ಇಲ್ಲಿವರೆಗೂ ಚಾರ್ಜ್ ಶೀಟ್ ಹಾಕಿಲ್ಲ. ಇದು ಅರಣ್ಯ ಹಾಗೂ ಪೊಲೀಸ್ ಇಲಾಖೆ ದೊಡ್ಡ ವೈಫಲ್ಯವಾಗಿರದೆ. ತಹಶೀಲ್ದಾರ್ ಮತ್ತು ಶಾಸಕರು ಈ ಬಗ್ಗೆ ಗಮನ ಹರಿಸಿ ತಪಿಸ್ಥತರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

‘ಮಲೆನಾಡು ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಿದ್ದು, ರೈತರು ಬೆಳೆದ ಬೆಳೆಗಳನ್ನು ಪ್ರತಿದಿನ ನಾಶಪಡಿಸುತ್ತಿವೆ. ಅಲ್ಲದೆ ಮನಷ್ಯರ ಮೇಲೆ ದಾಳಿ ಮಾಡುತ್ತಿವೆ. ಇದಕ್ಕೆ ಸರ್ಕಾರ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು. ಪ್ರಾಣಿಗಳ ಹತ್ಯೆ ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಆರ್ಎಸ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಹರ್ಷ, ತಾಲ್ಲೂಕು ಘಟಕದ ಉಪಾಧ್ಯಕ್ಷ ಸುನೀಲ್, ತಾಲ್ಲೂಕು ಯುವ ಅಧ್ಯಕ್ಷ ಅನಿಲ್, ಜಾವಗಲ್ ಹೋಬಳಿ ಘಟಕದ ಅಧ್ಯಕ್ಷ ಸುರೇಶ್, ಹಳೇಬೀಡು ಹೋಬಳಿ ಘಟಕದ ಅಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ರಿಯಾಜ್ ಅಹಮ್ಮದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.