ಗುರುವಾರ , ಜನವರಿ 28, 2021
15 °C

ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ : ಮಲ್ಲೇಶ್‌ಗೌಡ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಮತದಾರರು ಬೆಂಬಲ ನೀಡಬೇಕು ಎಂದು ಎ.ವಿ. ಕಾಂತಮ್ಮ ಮಹಿಳಾ ಕಾಲೇಜು ಉಪನ್ಯಾಸಕ ಎಚ್.ಎಲ್. ಮಲ್ಲೇಶ್‍ಗೌಡ ಮನವಿ ಮಾಡಿದರು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಏನಾದರೂ ಕೊಡುಗೆ ಸಲ್ಲಿಸಬೇಕೆಂಬ ಉದ್ದೇಶದಿಂದ ಸಾಹಿತ್ಯಾಸಕ್ತರ ಒತ್ತಾಯದ ಮೇರೆಗೆ ಸ್ಪರ್ಧೆ ಬಯಸಿದ್ದೇನೆ. ಉಪನ್ಯಾಸಕನಾಗಿ ಕನ್ನಡ ಭಾಷೆ ಬೆಳವಣಿಗೆಗೆ ಸಾಧ್ಯವಾದಷ್ಟು ಕೆಲಸ ಮಾಡಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.

‘ಕನ್ನಡ ಸಾಹಿತ್ಯ ಪರಿಷತ್ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ನಾಡು ನುಡಿಗೆ ತೊಂದರೆಯಾದಾಗ ಹೋರಾಡುವ ಗಟ್ಟಿತನ
ಉಳಿಸಿಕೊಂಡಿದೆ. ಮಹತ್ವದ ಹುದ್ದೆಗೆ ಪ್ರಜ್ಞಾವಂತರನ್ನು ಆರಿಸಬೇಕೆಂಬುದು ನನ್ನ ಬಯಕೆ. ಈ ಕುರಿತು ಸಾಕಷ್ಟು ಯೋಚನೆ ಮಾಡಿದ್ದೇನೆ ಎಂದರು.

ನಿವೃತ್ತ ಪ್ರಾಂಶುಪಾಲರಾದ ಮಂಜಪ್ಪ, ಲಕ್ಷ್ಮಿನಾರಾಯಣ್, ಚೌಡವಳ್ಳಿ ಪುಟ್ಟರಾಜು, ಡಿ.ಜಿ. ಕೃಷ್ಣೇಗೌಡ, ಉಪನ್ಯಾಸಕ ಸೀ.ಚ. ಯತೀಶ್ವರ್, ಬಿ.ಎಸ್. ದೇವರಾಜು, ಎಚ್.ಎಸ್. ಅನೀಲ್ ಕುಮಾರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.