ಬುಧವಾರ, ಅಕ್ಟೋಬರ್ 21, 2020
22 °C

ಕೆಎಸ್‌ಆರ್‌ಟಿಸಿ ಬಸ್‌-ಕಾರು ಅಪಘಾತ; ಸ್ಥಳದಲ್ಲೇ ವ್ಯಕ್ತಿ ಸಾವು, ನಾಲ್ವರು ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ರಾಯಾಪುರ ಗ್ರಾಮದ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬಂಟೇನಹಳ್ಳಿಯ ಶಿಯಾನ್ ಪಾಷಾ (19) ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಶಿಯಾನ್ ಪಾಷಾ, ಬುಧವಾರ ರಾತ್ರಿ ಬರುತ್ತೇನೆಂದು ಕರೆ ಮಾಡಿ ಮನೆಗೆ ತಿಳಿಸಿದ್ದರು. ಮಂಗಳವಾರ ರಾತ್ರಿಯೇ ಬಂಟೇನಹಳ್ಳಿ ಗ್ರಾಮದ ಮನೆಗೆ ಬಂದಿದ್ದು, ಬುಧವಾರ ತನ್ನ ಸ್ನೇಹಿತರೊಂದಿಗೆ ತಾಲ್ಲೂಕಿನ ರಾಯಾಪುರ ಸಮೀಪ ಕಾರಿನಲ್ಲಿ ಹಾಸನ ರಸ್ತೆಯಲ್ಲಿ ತೆರಳುತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಶಿಯಾನ್ ಪಾಷಾ ಸ್ಥಳದಲ್ಲೇ ಮೃತಪಟ್ಟರು. ಕಾರಿನಲ್ಲಿದ್ದ ಮುಸ್ತಿಯಾರ್, ಸಯ್ಯದ್ ತಬರಕ್, ಅಮಾನ್ ಹಾಗೂ ಮುಬಾರಕ್ ಗಂಭೀರ ಗಾಯಗೊಂಡಿದ್ದಾರೆ. ಅವರಿಗೆ ಬೇಲೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.