‘ಶಿಷ್ಟಾಚಾರ ಲೋಪ: ತಲೆಕೆಡಿಸಿಕೊಳ್ಳಲ್ಲ’
‘ನಾನು ಶಿಷ್ಟಾಚಾರಕ್ಕೆ ಆದ್ಯತೆ ಕೊಡುವ ವ್ಯಕ್ತಿ ಅಲ್ಲ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದೂ ಇಲ್ಲ. ನನಗೆ ದೇವಿಯ ದರ್ಶನ ಮುಖ್ಯ ದೇವಿಯ ದರ್ಶನ ಸಿಕ್ಕಿತು. ಉತ್ತಮ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಕೂಡ ಯಾವುದೇ ತೊಂದರೆಗೆ ಒಳಗಾಗದೆ ನೆಮ್ಮದಿಯಾಗಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಶಿಷ್ಟಾಚಾರದ ಬಗ್ಗೆ ಪ್ರಶ್ನಿಸಿದರೆ ಅಧಿಕಾರಿಗಳಿಗೆ ತೊಂದರೆ. ಅವರಿಗೇಕೆ ತೊಂದರೆ ಕೊಡಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಗ್ರಾಮ ವಾಸ್ತವ್ಯದ ವೇಳೆ ಅಧಿಕಾರಿಗಳು ಹೊರಗೆ ಮಲಗುತ್ತಿದ್ದರು. ನನ್ನಿಂದ ಅವರಿಗೆ ತೊಂದರೆಯಾಗಿದೆ. ಈಗ ಶಿಷ್ಟಾಚಾರದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಕುಮಾರಸ್ವಾಮಿ ಬೆಂಗಳೂರಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.