ಹಾಸನ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೇಲೆ ನನಗೆ ವೈಯಕ್ತಿಕ ಗೌರವವಿದೆ. ಆದರೆ ಅವರು ನಡೆಸುತ್ತಿರುವ ಸಮಾವೇಶ ಪಕ್ಷಾತೀತವಲ್ಲ. ಅದು ಅವರ ವೈಯಕ್ತಿಕ ರಾಜಕೀಯ ಉದ್ದೇಶಕ್ಕೆ ಸೀಮಿತವಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದಾಖಲೆಗಳಿಲ್ಲದೇ ಆರೋಪ ಮಾಡುವುದು ಸರಿಯಲ್ಲ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ವಿರುದ್ಧ ಜೆಡಿಎಸ್ ನಾಯಕರು ನಿರಾಧಾರ ಆರೋಪ ಮಾಡುತ್ತಿದ್ದು, ಇದನ್ನು ಖಂಡನೀಯ ಎಂದರು.

ಜೆಡಿಎಸ್ ನಾಯಕರು ಹಿಂದೆ ಕಾಂಗ್ರೆಸ್ ಪಕ್ಷದಿಂದ ಸಾಕಷ್ಟು ಸಹಾಯ ಪಡೆದಿದ್ದಾರೆ. ಇದೀಗ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಈಗ ನಮ್ಮ ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಅವರಿಗಿಲ್ಲ. ನಮ್ಮದು ಜನಪರ ಹಾಗೂ ಅಭಿವೃದ್ಧಿಪರ ಸರ್ಕಾರ. ಹಾಸನ ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡುತ್ತಿದೆ ಎಂದು ಹೇಳಿದರು.

ಜೆಡಿಎಸ್ ಸಮಾವೇಶ ಮಾಡುವುದು ಸ್ವಾಗತಾರ್ಹ. ಆದರೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಹಾಸನದಲ್ಲಿ ಮಾತ್ರ ಜೆಡಿಎಸ್ ಹೆಸರಿನಲ್ಲಿ ಸಮಾವೇಶ ನಡೆಸುತ್ತಿರುವುದು ಅವರ ಇಬ್ಭಾಗದ ನೀತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಐಐಟಿ ಸ್ಥಾಪನೆ, ಕಾಡಾನೆ ಸಮಸ್ಯೆ ಸೇರಿದಂತೆ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಕೇಂದ್ರದಲ್ಲಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಧ್ವನಿ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಸಂಬಂಧಿಸಿದಂತೆಯೂ ಯಾವುದೇ ರೀತಿಯ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು.

ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಿಸಲಾಯಿತು. ಜನಪರ ಯೋಜನೆ ಹೆಸರು ಬದಲಿಸುವ ಮೂಲಕ ದೇಶದ ಮಹಾನ್ ನಾಯಕ ಮಹಾತ್ಮ ಗಾಂಧಿ ಹೆಸರಿಗೆ ಅವಮಾನ ಮಾಡಿದ್ದಾರೆ. ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದೆ. ಎನ್ಡಿಎ ಸರ್ಕಾರದ ಭಾಗವಾಗಿರುವ ಎಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಪ್ರಶ್ನೆ ಮಾಡಬಹುದಿತ್ತು. ಹಾಗೆ ಮಾಡದೇ ಇರುವ ಅವರು, ಈ ಬಗ್ಗೆ ನಾಡಿನ ಜನರಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಚುನಾವಣೆ, ಸಮಾವೇಶಗಳು ಇದ್ದಾಗ ಮಾತ್ರ ಕುಮಾರಸ್ವಾಮಿ ಅವರಿಗೆ ಅಹಿಂದ, ವಿದ್ಯಾರ್ಥಿಗಳ ಶಿಷ್ಯವೇತನಗಳು ನೆನಪಾಗುತ್ತಿವೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳನ್ನು ಕೇವಲ ಅಹಿಂದ ವರ್ಗದವರು ಬಳಸುತ್ತಿದ್ದಾರಾ ಎಂದು ಪ್ರಶ್ನಿಸಿದರು.

ಕೇವಲ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ. ಸಮಾವೇಶಕ್ಕೂ ಮುನ್ನ ಅವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

ಕಾಂಗ್ರೆಸ್ ಪಕ್ಷ ಹಾಸನ ಜಿಲ್ಲೆಯಲ್ಲಿ ಎರಡು ಬೃಹತ್ ಸಮಾವೇಶ ನಡೆಸಿದ್ದು, ಅದಕ್ಕೆ ಪ್ರತಿಯಾಗಿ ಜೆಡಿಎಸ್ ಈಗ ಸಮಾವೇಶ ನಡೆಸುತ್ತಿದೆ ಎಂದು ಟೀಕಿಸಿದ ಅವರು, ಅಭಿವೃದ್ಧಿಯ ದೃಷ್ಟಿಯಿಂದ ಜೆಡಿಎಸ್ ನಾಯಕರು ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಬೇಕು. ದಾಖಲೆರಹಿತ ಆರೋಪ ಮಾಡುವುದನ್ನು ಬಿಟ್ಟು, ಪರಾಮರ್ಶೆ ಮಾಡಿಕೊಂಡು ಮಾತನಾಡಲಿ ಎಂದು ಸಲಹೆ ನೀಡಿದರು.

ಜಿಲ್ಲಾಮಟ್ಟದ ಅಧಿಕಾರಿಗಳ ಬಗ್ಗೆ ಜೆಡಿಎಸ್ ಶಾಸಕ ರೇವಣ್ಣ ಆರೋಪ ಮಾಡಿರುವುದನ್ನೂ ಖಂಡಿಸಿದ ಶ್ರೇಯಸ್ ಪಟೇಲ್, ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ಹಾಸನ ಜಿಲ್ಲೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇದನ್ನು ಸಹಿಸದೇ ಜೆಡಿಎಸ್ ನಾಯಕರು ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. ಯಾರ ಬಗ್ಗೆ ಮಾತನಾಡಬೇಕಾದರೂ ದಾಖಲೆಗಳೊಂದಿಗೆ ಮಾತನಾಡಬೇಕು. ಇಲ್ಲದಿದ್ದರೆ ಜನರು ಸತ್ಯ ಅರಿಯುತ್ತಾರೆ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಇ.ಎಚ್. ಲಕ್ಷ್ಮಣ್, ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ, ಮುಖಂಡರಾದ ಬನವಾಸೆ ರಂಗಸ್ವಾಮಿ, ದಾಸರಕೊಪ್ಪಲು ರಘು, ರಂಜಿತ್ ಗೊರೂರು ಇತರರು ಇದ್ದರು.

ಮಳೆಗಾಲದ ನಂತರ ಮೇಲ್ಸೇತುವೆ ಪೂರ್ಣ

ಜಿಲ್ಲೆಯ ಎರಡು ರೈಲ್ವೆ ಮೇಲ್ಸೇತುವೆಗಳ ಕಾಮಗಾರಿಯನ್ನು ಮಳೆಗಾಲದ ನಂತರ ಪೂರ್ಣಗೊಳಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು. ಈ ಯೋಜನೆಗೆ ಈಗಾಗಲೇ ಅಗತ್ಯ ಅನುಮೋದನೆ ದೊರೆತಿದ್ದು ಉಳಿದ ಸೌಕರ್ಯಗಳಿಗೆ ಹೆಚ್ಚುವರಿಯಾಗಿ ₹147 ಕೋಟಿ ಅನುದಾನಕ್ಕೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಹಣಕಾಸು ಇಲಾಖೆಯಿಂದ ಸಕಾರಾತ್ಮಕ ಸ್ಪಂದನೆ ಲಭಿಸಿದೆ ಎಂದರು. ಮಳೆಗಾಲದ ಒಳಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹುಡಾ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಕಾಡಾನೆ–ಮಾನವ ಸಂಘರ್ಷ ಇಂದು ನಿನ್ನೆಯದಲ್ಲ. ಈ ಸಮಸ್ಯೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರದಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನಕ್ಕಾಗಿ ಮನವಿ ಸಲ್ಲಿಸಲಾಗುವುದು. ಮುಖ್ಯಮಂತ್ರಿ ಗಮನಕ್ಕೂ ತರಲಾಗುವುದು ಎಂದು ಭರವಸೆ ನೀಡಿದರು. ಸುಪ್ರೀಂ ಕೋರ್ಟ್ನಲ್ಲಿ ಪ್ರಾಣಿಪ್ರಿಯರು ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಹಿನ್ನಡೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಇಟಿಎಫ್ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದರು.

ಸಮಾವೇಶಕ್ಕಾಗಿ ಅಹಿಂದ ಪರ ಮಾತು

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಿಂದುಳಿದ ವರ್ಗಗಳ ಪ್ರೀತಿ ಕಳೆದುಕೊಂಡಿದ್ದಾರೆ. ಕೇವಲ ಜ.24ರ ಸಮಾವೇಶವನ್ನು ಗುರಿಯಾಗಿಸಿಕೊಂಡು ಅಹಿಂದ ಸಮುದಾಯದ ಪರವಾಗಿ ಕುಮಾರಸ್ವಾಮಿ ಮಾತನಾಡುತ್ತಿದ್ದಾರೆ ಎಂದು ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ ಟೀಕಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ 3–5 ಮೊರಾರ್ಜಿ ವಸತಿ ಶಾಲೆಗಳು ಆರಂಭವಾಗಿವೆ. ರಸ್ತೆ ಸೇರಿ ಮೂಲಸೌಕರ್ಯ ಅಭಿವೃದ್ಧಿ ನಡೆದಿದೆ. ಅರಕಲಗೂಡು ಅರಸೀಕೆರೆ ಬಾಣಾವಾರ ಹಿರಿಯೂರು ರಸ್ತೆ ಕಾಮಗಾರಿಗಳು ನಡೆದಿವೆ. ಆದರೆ ಕೇಂದ್ರ ಸಚಿವರಾಗಿ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಅಹಿಂದ ವಿಚಾರವನ್ನು ವೈಯಕ್ತಿಕವಾಗಿ ಎತ್ತಿಕೊಳ್ಳುತ್ತಿರುವುದು ಏಕೆ? ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ಗೊಂದಲದಿಂದಾಗಿ ಪ್ರತ್ಯೇಕ ಸಮಾವೇಶ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ಇವರ ಮುಖವಾಡ ಬಯಲಾಗಲಿದೆ ಎಂದರು. ದುದ್ದ ರಸ್ತೆ ಕಾಮಗಾರಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಮಹದೇವಪ್ಪ ಅವರು ಮಾಡಿಸಿದ್ದು ರೇವಣ್ಣ ಅವರ ಕಾಲದಲ್ಲಲ್ಲ. 2018ರಲ್ಲಿ ಈ ಕಾಮಗಾರಿ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದರು. ನೂತನ ಲೇಔಟ್ಗಳಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನೀರಿನ ಪೈಪ್ಲೈನ್ ಅಳವಡಿಸಬೇಕಿದ್ದು ಭೂಸ್ವಾಧೀನಕ್ಕೆ ರೈಲ್ವೆ ಇಲಾಖೆಯ ಆದೇಶ ಬಂದ ಕೂಡಲೇ ತ್ವರಿತವಾಗಿ ಮುಗಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.