ಕಾಂಪೌಂಡ್ ಕುಸಿದು ಕಾರ್ಮಿಕ ಸಾವು
ಹಾಸನ: ನಗರದ ಡೇರಿ ವೃತ್ತದ ಬಳಿಯಲ್ಲಿರುವ ಕೈಗಾರಿಕಾ ಕೇಂದ್ರದಲ್ಲಿ ಗುರುವಾರ ಸಂಜೆ ನಿರ್ಮಾಣ ಹಂತದಲ್ಲಿದ್ದ ಕಾರು ಮಾರಾಟ ಶೋರೂಂನ ಕಾಂಪೌಂಡ್ ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಜಮ್ಮನಹಳ್ಳಿ ಗ್ರಾಮದ ಹನುಮಂತಪ್ಪ (45) ಮೃತ ಕಾರ್ಮಿಕ.
ಸಂಜೆ 5.30ರ ಸಮಯದಲ್ಲಿ ಕಾಂಪೌಂಡ್ ಅಡಿಪಾಯ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕನ ಮೇಲೆ ಗೋಡೆ ಹಾಗೂ ಮೇಲಿನಿಂದ ಮಣ್ಣು ಕುಸಿದು ಬಿತ್ತು. ಸ್ಥಳದಲ್ಲಿದ್ದ ಇತರ ಕಾರ್ಮಿಕರು ಸಾಕಷ್ಟು ಯತ್ನಿಸಿದರೂ ಮಣ್ಣು ಹಾಗೂ ಕಲ್ಲುಗಳನ್ನು ಸರಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಬಡಾವಣೆ ಠಾಣೆ ಪೊಲೀಸರು ಶವ ಹೊರತೆಗೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.