ಹಾಸನ: ಹಾಸನ- ಬೇಲೂರು -ಚಿಕ್ಕಮಗಳೂರು ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಭೂಮಿ ಕಳೆದುಕೊಂಡವರಿಗೆ ಸರ್ಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಬೇಕು.ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಶಾಸಕ ಎಚ್.ಡಿ. ರೇವಣ್ಣ ತಿಳಿಸಿದರು.

ನಗರದ ಹಾಸನ ಹಾಲು ಒಕ್ಕೂಟದ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ -ಬೇಲೂರು -ಬಿಳಿಕೆರೆ ಹೆದ್ದಾರಿ ಕಾಮಗಾರಿಗೆ ₹ 2ಸಾವಿರ ಕೋಟಿ ಬಿಡುಗಡೆಯಾಗಿದೆ. ಹೊಳೆನರಸೀಪುರ ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರಂ ನಿರ್ಮಾಣಕ್ಕೆ ಹೆಚ್ಚುವರಿ ₹ 6 ಕೋಟಿ ಬಿಡುಗಡೆ ಮಾಡಲಾಗಿದ್ದು, ಒಟ್ಟಾರೆ, ₹ 22 ಕೋಟಿ ಮಂಜೂರಾಗಿದೆ ಎಂದರು.

ಹೊಳೆನರಸೀಪುರದ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ₹ 460 ಕೋಟಿ ಮಂಜೂರು ಮಾಡಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹಾಸನದ ವಿಮಾನ ನಿಲ್ದಾಣದಿಂದ ಬೇಲೂರು, ಹಳೇಬೀಡಿಗೆ ಹೊಸದಾಗಿ ವರ್ತುಲ ರಸ್ತೆ ನಿರ್ಮಾಣಕ್ಕೆ ₹ 750 ಕೋಟಿ ಬಿಡುಗಡೆ ಮಾಡಿದ್ದು, ಡಿಪಿಆರ್ ಸಿದ್ಧಗೊಂಡಿದೆ ಎಂದು ತಿಳಿಸಿದರು.

ಚನ್ನರಾಯಪಟ್ಟಣ– ಹೊಳೆನರಸೀಪುರ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಕಾಮಗಾರಿಗೆ ಅನುಮತಿ ದೊರೆತಿದ್ದು, ಕುಮಾರಸ್ವಾಮಿ ನೇತೃತ್ವದಲ್ಲಿ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ವಂದೇ ಭಾರತ್ ರೈಲನ್ನು ಹಾಸನದಿಂದಲೂ ಸಂಚರಿಸಲು ಮನವಿ ಮಾಡಲಾಗಿದೆ. ಶೀಘ್ರದಲ್ಲಿಯೇ ಈ ಮಾರ್ಗದಲ್ಲಿ ರೈಲು ಓಡಾಡಲಿದೆ. ಹಾಸನದಿಂದ ಚೆನ್ನೈಗೆ ನೂತನ ರೈಲು ಪ್ರಾರಂಭಿಸಲು ಮನವಿ ಮಾಡಲಾಗಿದೆ ಎಂದರು.

ಜನವರಿ 24 ರಂದು ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಹಾಸನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಸಂಬಂಧ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಹಿರಿಯ ಮುಖಂಡರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಯುಗಾದಿ ಬಳಿಕ ಮೆಗಾ ಡೈರಿ ಆರಂಭ

ಮುಂದಿನ ಯುಗಾದಿ ಬಳಿಕ ಮೆಗಾ ಡೈರಿ ಉದ್ಘಾಟನೆ ಮಾಡಲಾಗುವುದು ಎಂದು ಹಾಸನ ಹಾಲು ಒಕ್ಕೂಟದ ಅಧ್ಯಕ್ಷರೂ ಆದ ಶಾಸಕ ರೇವಣ್ಣ ತಿಳಿಸಿದರು. ಮೆಗಾ ಡೈರಿಯ ಶೇ 90ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಸ್ವಚ್ಛತೆ ಹಾಗೂ ಹೊರಾಂಗಣದಲ್ಲಿ ಮಿನಿ ಅಮ್ಯೂಜ್ಮೆಂಟ್ ಪಾರ್ಕ್ ನಿರ್ಮಾಣ ಸೇರಿದಂತೆ ಇತರ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಂಕ್ರಾಂತಿ ಹಬ್ಬದ ಬಳಿಕ ಮೆಗಾ ಡೈರಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು. ಡೈರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ಹಾಗೂ ಮುಖ್ಯಮಂತ್ರಿಯನ್ನು ಆಹ್ವಾನಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.