ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮೀನು ವಿವಾದ: ದಲಿತರ ಮೇಲೆ ಹಲ್ಲೆ

Published 3 ಮಾರ್ಚ್ 2024, 15:21 IST
Last Updated 3 ಮಾರ್ಚ್ 2024, 15:21 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ಶನಿವಾರ ಜಮೀನು ವಿವಾದದ ಹಿನ್ನೆಲೆಯಲ್ಲಿ ದಲಿತರ ಮೇಲೆ ಹಲ್ಲೆ ಮಾಡಲಾಗಿದ್ದು, ಬೈಕ್‌ಗೆ ಬೆಂಕಿ ಹಚ್ಚಲಾಗಿದೆ.

ಗ್ರಾಮದ ರಂಗಪ್ಪ ಹಾಗೂ ಅವರ ಸಂಬಂಧಿ ಹಲ್ಲೆಗೆ ಒಳಗಾದವರು. ಶನಿವಾರ ಇಬ್ಬರೂ ಬೈಕ್‌ನಲ್ಲಿ ತೆರಳಿದ್ದರು. ಬೈಕ್‌ ಅನ್ನು ನಿಲ್ಲಿಸಿ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ಬಂದ ಆರೋಪಿಗಳಾದ ಮಂಜುನಾಥ ಹಾಗೂ ಮದನ್‌ಕುಮಾರ್‌ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಇದನ್ನು ಪ್ರಶ್ನಿಸಿದ ರಂಗಪ್ಪ ಅವರ ವಿರುದ್ಧ ಜಾತಿ ಹೆಸರಿನಲ್ಲಿ ನಿಂದನೆ ಮಾಡಿದ್ದು, ಕಲ್ಲು ತೂರಿ ಹಲ್ಲೆ ಮಾಡಿದ್ದಾರೆ. ಅಲ್ಲಿಯೇ ಇದ್ದ ರಂಗಪ್ಪ ಅವರ ಬೈಕ್‌ಗೂ ಬೆಂಕಿ ಹಚ್ಚಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಆದರೆ, ಬೈಕ್ ಬಹುತೇಕ ಸುಟ್ಟು ಹೋಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT