ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ, ಭೂಕುಸಿತ: ಶಿರಾಡಿ ಘಾಟ್‌ ರಸ್ತೆ ಬಂದ್

Last Updated 22 ಜುಲೈ 2021, 8:46 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಾಲ್‌ ಬಳಿ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್‌ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌ ಮಾಡಲಾಗಿದೆ.

ಮಂಗಳೂರಿಗೆ ತೆರಳುವವರು ಬೇಲೂರು ಮೂಲಕ ಚಾರ್ಮಾಡಿ ಘಾಟ್‌ನಲ್ಲಿ ತೆರಳುವಂತೆ ಸೂಚನೆ ನೀಡಲಾಗಿದ್ದು. ಮೂಡಿಗೆರೆ, ಹಾನುಬಾಳು, ಕೊಟ್ಟಗೆಹಾರದ ಮೂಲಕ ಬದಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಧರ್ಮಸ್ಥಳ, ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೆಳಿಗ್ಗೆ ಭೂಕುಸಿತವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಸಂಚಾರ ಬಂದ್‌ ಮಾಡಲಾಗಿದೆ.

ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರತೀಕ್‌, ತಹಶೀಲ್ದಾರ್‌ ಜಯಕುಮಾರ್‌, ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT