ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ದೊಡ್ಡತಪ್ಪಲೆ ಬಳಿ ಭೂಕುಸಿತ ನಿರಂತರ: ಮಳೆ ಸುರಿದಂತೆ ಕುಸಿಯುತ್ತಲೇ ಇದೆ ಇಳೆ

ಸ್ಥಗಿತವಾಗುತ್ತಿರುವ ವಾಹನ ಸಂಚಾರ
Published : 2 ಆಗಸ್ಟ್ 2024, 7:21 IST
Last Updated : 2 ಆಗಸ್ಟ್ 2024, 7:21 IST
ಫಾಲೋ ಮಾಡಿ
Comments
ಹೆದ್ದಾರಿ ಬಂದ್ ಮಾಡದಿರಲು ಸೂಚನೆ
ಭೂ ಕುಸಿತ ಉಂಟಾಗುವ ಸಂದರ್ಭದಲ್ಲಿ ಮಾತ್ರ ವಾಹನಗಳನ್ನು ತಡೆದು ಮಣ್ಣು ತೆರವುಗೊಳಿಸಿದ ನಂತರ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ಹಾಗೂ ಯಂತ್ರೋಪಕರಣ ನೀಡಲಾಗುವುದು. ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ ಎಂದರು. ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಹಾಸನ ಹಾಗೂ ಮಂಗಳೂರು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೆಚ್ಚಿನ ಭೂಕುಸಿತದ ಸಂದರ್ಭದಲ್ಲಿ ಮಾತ್ರ ಬಂದ್ ಮಾಡಬೇಕು. ಕೂಡಲೇ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲು ನಿರ್ದೇಶನ ನೀಡಲಾಗಿದೆ ಎಂದರು.
ಭೂಕುಸಿತದಿಂದ ಸಂಚಾರ ಬಂದ್‌ ಆದ ಸಂದರ್ಭದಲ್ಲಿ ಹಾಸನದ ಹೊರವಲಯದಲ್ಲಿ ನಿಂತಿರುವ ವಾಹನಗಳು.
ಭೂಕುಸಿತದಿಂದ ಸಂಚಾರ ಬಂದ್‌ ಆದ ಸಂದರ್ಭದಲ್ಲಿ ಹಾಸನದ ಹೊರವಲಯದಲ್ಲಿ ನಿಂತಿರುವ ವಾಹನಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT