ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಾರ ಪ್ರಮಾಣದ ಪ್ಲಾಸ್ಟಿಕ್ ವಶ: ಎಚ್ಚರಿಕೆ

Last Updated 2 ಜೂನ್ 2019, 19:57 IST
ಅಕ್ಷರ ಗಾತ್ರ

ಬೇಲೂರು: ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಶನಿವಾರ ದಾಳಿ ನಡೆಸಿದ ಪುರಸಭೆ ಸಿಬ್ಬಂದಿ ₹ 40 ಸಾವಿರ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದಾರೆ.

ಪಟ್ಟಣದಲ್ಲಿ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಆದರೂ ಪಟ್ಟಣದ ಬಹುತೇಕ ಅಂಗಡಿ ಮತ್ತು ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ ಬಳಸಲಾಗುತ್ತಿತ್ತು. ಮುಖ್ಯಾಧಿಕಾರಿ ಉಮೇಶ್‌ ನೇತೃತ್ವದ ತಂಡ ದಾಳಿ ಮಾಡಿ ಪ್ಲಾಸ್ಟಿಕ್‌ ಲೋಟಾ, ತಟ್ಟೆ, ಶೀಟ್‌ಗಳನ್ನು ವಶಪಡಿಸಿಕೊಂಡಿದೆ.

ಮುಖ್ಯಾಧಿಕಾರಿ ಉಮೇಶ್‌ ಮಾತನಾಡಿ, ‘ಪಟ್ಟಣದ 23 ವಾರ್ಡ್‌ಗಳಿಂದ ಪ್ರತಿನಿತ್ಯ 5ಟನ್‌ಗೂ ಅಧಿಕ ಕಸ ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪಾಸ್ಟಿಕ್‌ ಇರುತ್ತದೆ. ಪ್ಲಾಸ್ಟಿಕ್‌ ವಿಲೇವಾರಿ ಮಾಡುವುದೇ ದೊಡ್ಡ ತಲೆನೋವಾಗಿದೆ. ಮೂರು ವರ್ಷದ ಹಿಂದೆಯೇ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಆದರೂ ಮಾರಾಟ ನಿಂತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವುದು ಕಂಡು ಬಂದರೆ, ಅಂಗಡಿ ಮಾಲೀಕರಿಗೆ ಭಾರಿ ಪ್ರಮಾಣದಲ್ಲಿ ದಂಡ ವಿಧಿಸುವುದರ ಜೊತೆಗೆ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ’ ಎಚ್ಚರಿಸಿದರು.

ದಾಳಿಯಲ್ಲಿ ಪುರಸಭೆ ಆರೋಗ್ಯಾಧಿಕಾರಿ ಎಸ್‌.ವೆಂಕಟೇಶ್‌, ಶಿಗ್ಗಾವಿ, ಕುಮಾರ್‌, ಜಯರಾಂ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT