ಮಂಗಳವಾರ, ಜೂನ್ 22, 2021
24 °C
ಶೇ 50ರಷ್ಟು ಕೋವಿಡ್‌ ಸಾವು ತಡವಾಗಿ ದಾಖಲು ಕಾರಣ: ಡಿ.ಸಿ ಗಿರೀಶ್‌

40 ಹಾಸಿಗೆಗಳ ಕೋವಿಡ್‌ ಕೇರ್‌ ಕೇಂದ್ರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ನ್ಯಾಷನಲ್ ಹ್ಯೂಮನ್ ರೈಟ್ಸ್ ವೆಲ್ಫೇರ್ ಸಂಸ್ಥೆ ವತಿಯಿಂದ ನಗರದ ಕೆ.ಆರ್. ಪುರಂ ಮುಸ್ಲಿಂ ಹಾಸ್ಟೆಲ್ ನಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ (ಸಿಸಿಸಿ) ತೆರೆಯಲಾಗಿದೆ.

ಸೆಂಟರ್ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಗಿರೀಶ್‌, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಇದೇ ರೀತಿ ಹೆಚ್ಚು ಕೋವಿಡ್ ಕೇರ್ ಕೇಂದ್ರ ಸ್ಥಾಪನೆಯಾದರೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ತಡವಾಗಿ ಆಸ್ಪತ್ರೆಗೆ ದಾಖಲು ಆಗುತ್ತಿರುವುದರಿಂದ ಶೇಕಡಾ 50 ರಷ್ಟು ಕೋವಿಡ್ ಸಾವು ಆಗುತ್ತಿದೆ. ರೋಗದ ಲಕ್ಷಣಗಳು ಕಂಡು ಬಂದರೆ ಪ್ರಾರ್ಥಮಿಕ ಹಂತದಲ್ಲೇ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಾಗಿ, ಚಿಕಿತ್ಸೆ ಪಡೆದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕರು ರೋಗದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಸಂಘ-ಸಂಸ್ಥೆಗಳು ಧೈರ್ಯದಿಂದ ಮುಂದೆ ಬಂದು ಈ ರೀತಿ ಕೋವಿಡ್ ಕೇಂದ್ರ ಸ್ಥಾಪಿಸಬೇಕು ಎಂದು ವೆಲ್ಫೇರ್ ಸಂಸ್ಥೆಯ ಪ್ರಯತ್ನವನ್ನು ಶ್ಲಾಘಿಸಿದರು.

ಸಾಮಾಜಿಕ ಕಾರ್ಯಕರ್ತ ಪಾಷಾ ಮಾತನಾಡಿ, ಸಿಸಿಸಿ ಸ್ಥಾಪನೆಯಿಂದ ಜನರ ಪ್ರಾಣ ಉಳಿಸಬಹುದು. ಶೀಘ್ರದಲ್ಲೇ ಹಳೆ ಈದ್ಗಾ ಮೈದಾನದ ಬಳಿ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಕೇಂದ್ರವನ್ನು ಸಮುದಾಯದ ವತಿಯಿಂದ ಪ್ರಾರಂಭಿಸಲಾಗುವುದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಕಾರ ನೀಡುತ್ತಿದೆ ಎಂದರು.

ನ್ಯಾಷನಲ್ ಹ್ಯೂಮನ್ ರೈಟ್ಸ್ ವೆಲ್ಫೇರ್ ಸಂಸ್ಥೆಯ ಕಾರ್ಯದರ್ಶಿ ಇಮ್ರಾನ್ ಖಾನ್,  ಜಿಲ್ಲಾ ಕಾರ್ಯದರ್ಶಿ ರೆಹಮಾನ್ ಖಾನ್, ಉಪಾದ್ಯಕ್ಷ ಫರ್‍ಹಾನ್, ಭಾರತಿಯ ರೆಡ್ ಕ್ರಾ್ಸ್ ಸಂಸ್ಥೆಯ ಜಿಲ್ಲಾ ಶಾಖೆ ಅಧ್ಯಕ್ಷ ಎಚ್.ಪಿ. ಮೋಹನ್, ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಜನಪ್ರಿಯ ಆಸ್ಪತ್ರೆಯ ಡಾ. ಬಷೀರ್, ಮುಸ್ಲಿಂ ಹಾಸ್ಟೆಲ್‍ ಕಾರ್ಯದರ್ಶಿ ಸುಫಿಯಾನ್ ಹುಸೇನ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು