ಹಾಸನ: ‘ಜೆಡಿಎಸ್ ತೊರೆದು ಬಿಜೆಪಿ ಸೇರುವಂತೆ ನಗರಸಭೆ ಸದಸ್ಯರಿಗೆ ಆಮಿಷವೊಡ್ಡಿ, ಮುಂಗಡವಾಗಿ ಹತ್ತು ಲಕ್ಷ ರೂಪಾಯಿ ನಗದು ನೀಡಿದ್ದೇನೆ’ ಎಂದು ಆರೋಪ ಮಾಡಿರುವಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್‌ನ ಏಳುಸದಸ್ಯರು ವಿಷಯಾಧಾರಿತವಾಗಿ ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ. ಇದು ಜೆಡಿಎಸ್ಪಕ್ಷದ ಆಂತರಿಕ ವಿಚಾರ. ಎರಡನೇ ವಾರ್ಡ್ ಸದಸ್ಯೆ ಕಲೈ ಅರಸಿ ಅವರಿಗೆ ₹10 ಲಕ್ಷನೀಡಿದ್ದೇನೆ ಎಂಬ ಆರೋಪ ಸುಳ್ಳು’ ಎಂದು ಸ್ಪಷ್ಪಡಿಸಿದರು.

‘ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನು ಕಾರಣನಲ್ಲ. ಅದಕ್ಕೂ ನನಗೂ ಸಂಬಂಧ ಇಲ್ಲ. ಸಿ.ಎಂ ಯಡಿಯೂರಪ್ಪ ಅವರನ್ನು ನಾನೇಕೆ ಬ್ಲ್ಯಾಕ್ ಮೇಲ್ ಮಾಡಲಿ? ಶಾಸಕ ಎಚ್.ಡಿ. ರೇವಣ್ಣ ಅವರ ಹೇಳಿಕೆ ಬಾಲಿಶತನದಿಂದ ಕೂಡಿದೆ’ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.