ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕ ಸುರೇಶ್ ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡುತ್ತಿಲ್ಲ: KDP ಸದಸ್ಯ ನಂದೀಶ್ ಆರೋಪ

Published 8 ಜುಲೈ 2024, 15:25 IST
Last Updated 8 ಜುಲೈ 2024, 15:25 IST
ಅಕ್ಷರ ಗಾತ್ರ

ಬೇಲೂರು: ‘ಬೇಲೂರು ಶಾಸಕ ಎಚ್.ಕೆ.ಸುರೇಶ್ ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡುವುದಿಲ್ಲ ಎಂಬುದನ್ನು ವಿಧಾನಸೌಧದಲ್ಲಿ ಮಾತನಾಡುತ್ತಿದ್ದಾರೆ’ ಎಂದು ಕೆಡಿಪಿ‌ ಸದಸ್ಯ ನಂದೀಶ್ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶಾಸಕರು ಮತ್ತು ಅಧಿಕಾರಗಳ ನಡುವೆ ಸಮನ್ವಯದ ಕೊರತೆ ಇದೆ. ತಾಲ್ಲೂಕಿನ ಆಡಳಿತ ವ್ಯವಸ್ಥೆ ಕುಸಿದಿದೆ, ಶಾಸಕರ ವರ್ತನೆಗೆ ಬೇಸತ್ತ ಅಧಿಕಾರಿಗಳು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ, ಇವರು ಪ್ರತಿಷ್ಠೆ ಮತ್ತು ಶೋಕಿಗಾಗಿ ಶಾಸಕರಾಗಿದ್ದಾರೆಯೇ ಹೊರತು ಜನಸಾಮಾನ್ಯರ ಬಗ್ಗೆ ಇವರಿಗೆ ಕಾಳಜಿ ಇಲ್ಲ, ಚನ್ನಕೇಶವ ದೇಗುಲದ ಅಡ್ಡೆದಾರರ ಟೆಂಡರ್ ಕರೆದು ಸಂಪ್ರದಾಯ ಮೀರುತ್ತಿದ್ದಾರೆ’ ಎಂದು ಆರೋಪಿಸಿದರು.

ಕೆಡಿಪಿ ಸದಸ್ಯ ಬಿಕ್ಕೋಡು ಚೇತನ್ ಮಾತನಾಡಿ, ‘ಶಾಸಕರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಯಾವುದೇ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ, ಸರ್ಕಾರದ ಬಳಿ ಅನುದಾನ ಕೇಳಲು ನಾವು ಸಿದ್ಧರಿದ್ದೇವೆ. ಆದರೆ, ಶಾಸಕರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಕೆಡಿಪಿ ಸದಸ್ಯರಾದ ಜ್ಯೋತಿ, ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT