ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾವಿನಹಳ್ಳಿ: ಚಿರತೆ ದಾಳಿಗೆ ಮತ್ತೊಂದು ಹಸು ಬಲಿ

Published 1 ಡಿಸೆಂಬರ್ 2023, 13:31 IST
Last Updated 1 ಡಿಸೆಂಬರ್ 2023, 13:31 IST
ಅಕ್ಷರ ಗಾತ್ರ

ಸಕಲೇಶಪುರ: ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಶುಕ್ರವಾರ ಮತ್ತೊಂದು ಹಸು ಮೃತಪಟ್ಟಿದೆ.

ಮೇಯಲು ಬಿಟ್ಟಿದ ಗ್ರಾಮದ ಜಯಣ್ಣ ಅವರ ಹಸುವನ್ನು ಚಿರತೆ ಕೊಂದು ತಿಂದು ಹಾಕಿದೆ. ಎರಡು ದಿನಗಳ ಹಿಂದೆಯೂ ಇದೇ ರೈತ ಜಯಣ್ಣ ಅವರ ಕರುವನ್ನು ಚಿರತೆ ತಿಂದು ಹಾಕಿತ್ತು. ಸ್ಥಳಕ್ಕೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ‍ಪರಿಶೀಲಿಸಿದರು.

ಗ್ರಾಮಸ್ಥರ ಆಕ್ರೋಶ: ಬಯಲು ಸೀಮೆಯಲ್ಲಿ ರಾಸುಗಳು ಹಾಗೂ ಮನುಷ್ಯರ ಮೇಲೆ ದಾಳಿ ಮಾಡುತ್ತಿರುವ ಚಿರತೆಯನ್ನು ಹಿಡಿದು ತಾಲ್ಲೂಕಿಗೆ ತಂದು ಬಿಡುತ್ತಿದ್ದಾರೆ. ಮಾವಿನಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಾಣಿಸಿಕೊಂಡಿರುವ ಚಿರತೆಯನ್ನು ಒಂದು ತಿಂಗಳ ಹಿಂದೆ ಅರಸೀಕೆರೆ ತಾಲ್ಲೂಕಿನಿಂದ ಹಿಡಿದು ತಂದು ಬಿಟ್ಟಿದ್ದಾರೆ ಎಂದು ಮಾವಿನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ನಾಳೆಯಿಂದ ಪ್ರಾರಂಭಿಸಲಾಗುವುದು ಆದಷ್ಟು ಬೇಗ ಹಿಡಿದು ಸ್ಥಳಾಂತರ ಮಾಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಶಿಲ್ಪಾ ವಸಂತ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT