ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಚಿರತೆ ದಾಳಿ: ಮೇಕೆಗಳ ಬಲಿ

Published 19 ಮಾರ್ಚ್ 2024, 15:12 IST
Last Updated 19 ಮಾರ್ಚ್ 2024, 15:12 IST
ಅಕ್ಷರ ಗಾತ್ರ

ಹಾಸನ: ತಾಲ್ಲೂಕಿನ ಜೋಡಿ ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ಮಾಡಿ, ನಾಲ್ಕು ಮೇಕೆಗಳನ್ನು ಕೊಂದಿದೆ.

ಸೋಮವಾರ ರಾತ್ರಿ ಗ್ರಾಮದೊಳಗೆ ನುಗ್ಗಿದ ಚಿರತೆ, ರಂಗೇಗೌಡ ಎಂಬುವವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೂರು ಮೇಕೆಗಳನ್ನು ಕೊಂದಿದೆ. ನಂತರ ಅದೇ ಗ್ರಾಮದ ವೆಂಕಟೇಗೌಡ ಎಂಬುವವರ ಕೊಟ್ಟಿಗೆಗೆ ದಾಳಿ ಮಾಡಿ ಮೇಕೆಯನ್ನು ಚಿರತೆ ಹೊತ್ತೋಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ .

ಗ್ರಾಮದಲ್ಲಿ ಚಿರತೆ ಹಾವಳಿಯಿಂದ ಜನರು ಆತಂಕಕ್ಕೀಡಾಗಿದ್ದು, 15 ದಿನಗಳ ಹಿಂದೆ ಎರಡು ನಾಯಿಗಳನ್ನು ಚಿರತೆ ಹೊತ್ತೋಯ್ದಿತ್ತು. ಹಗಲು ವೇಳೆ ರೈತರ ಜಮೀನಿನಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT