ಚನ್ನರಾಯಪಟ್ಟಣ: ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ ಆಲಗೋಡನಹಳ್ಳಿ ಗ್ರಾಮದ ಬಳಿ ಇರಿಸಿದ್ದ ಬೋನಿಗೆ ಅಂದಾಜು 2-3 ವರ್ಷದ ಹೆಣ್ಣು ಚಿರತೆ ಮಂಗಳವಾರ ರಾತ್ರಿ ಸೆರೆಸಿಕ್ಕಿದೆ.
ಕರುಗಳ ಮೇಲೆ ಚಿರತೆಗಳು ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ದೂರು ಸಲ್ಲಿಸಿದ್ದರಿಂದ ಮೂರು ದಿನಗಳ ಹಿಂದೆ ಅರಣ್ಯ ಇಲಾಖೆವತಿಯಿಂದ ಗ್ರಾಮದ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು. ಪಶು ಆಸ್ಪತ್ರೆಯ ವೈದ್ಯರು ಬುಧವಾರ ಚಿರತೆಯ ಆರೋಗ್ಯ ತಪಾಸಣೆ ನಡೆಸಿದರು. ನಂತರ ಚಿರತೆಯನ್ನು ಕಾಡಿಗೆ ಬಿಡಲಾಯಿತು.