ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ಹೆಜ್ಜೆ ಗುರುತು: ಆತಂಕ

Last Updated 20 ಅಕ್ಟೋಬರ್ 2020, 2:39 IST
ಅಕ್ಷರ ಗಾತ್ರ

ಹೆತ್ತೂರು: ಹೋಬಳಿಯ ಪಶ್ಚಿಮಘಟ್ಟದ ತಪ್ಪಲಿನ ಕಲ್ಲುತೋಟ ಗ್ರಾಮದಲ್ಲಿ ಚಿರತೆ ಓಡಾಡಿರುವ ಹೆಜ್ಜೆಯ ಗುರುತುಗಳು ಕಂಡು ಬಂದಿದ್ದು ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ವಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜೇಡಿಗದ್ದೆ ಪಕ್ಕದ ಕಲ್ಲುತೋಟದ ದ್ಯಾವಪ್ಪಗೌಡ ಎಂಬುವರ ಮನೆಯ ಸುತ್ತಮುತ್ತ ಚಿರತೆ ಓಡಾಡಿರುವ ಗುರುತುಗಳು ಕಂಡು ಬಂದಿವೆ.

ಜೇಡಿಗದ್ದೆ ಹಾಗೂ ಕಲ್ಲುತೋಟ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು ಬೆರಳೆಣಿಕೆಯಷ್ಟು ಕುಟುಂಬಗಳು ಗ್ರಾಮದಲ್ಲಿ ನೆಲೆಸಿವೆ. ಗ್ರಾಮದ ಸುತ್ತಮುತ್ತ ಚಿರತೆ, ಕಾಡಾನೆ, ಕಾಡೆಮ್ಮೆ ಸೇರಿದಂತೆ ಇತರ ಕಾಡು ಪ್ರಾಣಿಗಳು ಹೆಚ್ಚಾಗಿದ್ದು ಇದು ಜನರಲ್ಲಿ ಹೆಚ್ಚು ಆತಂಕ ಮೂಡಿಸಿದೆ.

ನಮಗೆ ರಕ್ಷಣೆ ನೀಡಬೇಕೆಂದು ಗ್ರಾಮಸ್ಥರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT