ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ನೂರಕ್ಕಿಂತ ಕಡಿಮೆ ಪ್ರಕರಣ

109 ಜನರಿಗೆ ಸೋಂಕು ದೃಢ, ಮತ್ತೆ ನಾಲ್ವರ ಸಾವು
Last Updated 23 ಅಕ್ಟೋಬರ್ 2020, 14:34 IST
ಅಕ್ಷರ ಗಾತ್ರ

ಹಾಸನ: ನಾಲ್ಕು ತಿಂಗಳ ಬಳಿಕ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಸಂಖ್ಯೆ ನೂರಕ್ಕಿಂತ ಕಡಿಮೆ ದಾಖಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿತ್ಯ ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸುತ್ತಿದೆ. ಪರೀಕ್ಷೆಹೆಚ್ಚಿದ್ದಂತೆ ಸೋಂಕು ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದವು. ವಾರದಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿದೆ.

ಹೊಸದಾಗಿ ಶುಕ್ರವಾರ 109 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 23,909ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮತ್ತೆ ನಾಲ್ಕು ಮಂದಿ ಮೃತರಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 413ಕ್ಕೆ ಏರಿಕೆಯಾಗಿದೆ.

ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಸನದ ಇಬ್ಬರು, ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸಿಲ್ಲ.

1,930 ಸೋಂಕಿತರು ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾರೆ. ಶುಕ್ರವಾರ ಬಿಡುಗಡೆಯಾದ 316 ಜನ ಸೇರಿದಂತೆ ಈವರೆಗೆ 21,566 ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಚನ್ನರಾಯಪಟ್ಟಣ 18, ಆಲೂರು 7, ಹಾಸನ 44, ಹೊಳೆನರಸೀಪುರ 4, ಅರಕಲಗೂಡು 15, ಬೇಲೂರು 6, ಸಕಲೇಶಪುರ 8, ಅರಸೀಕೆರೆ 6 ಮಂದಿ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT